ಬ್ರೇಕಿಂಗ್ ನ್ಯೂಸ್
11-08-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಆ.11 : ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಲ್ಲ, ಪಕ್ಷದ ಹೈಕಮಾಂಡ್ ಸೂಚನೆಯಂತೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ ಎನ್ನುವುದು ಬಹಿರಂಗವಾಗಿದ್ದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದ್ದು ಅದರಲ್ಲಿಯೇ ಕಿತ್ತುಹಾಕುವ ವಿಚಾರ ಉಲ್ಲೇಖವಾಗಿದೆ.
ರಾಜ್ಯಪಾಲರ ವಿಶೇಷ ಕರ್ತವ್ಯಾಧಿಕಾರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಪತ್ರ ರವಾನೆಯಾಗಿದೆ. ಈ ಪತ್ರದಲ್ಲಿ " ಸಹಕಾರ ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ " ಎಂದು ಉಲ್ಲೇಖಿಸಲಾಗಿದೆ.
ರಾಜಣ್ಣ ಅವರು ತಮ್ಮನ್ನು ಕಿತ್ತು ಹಾಕುವ ವಿಚಾರ ತಿಳಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ಸೋಮವಾರ ಮಧ್ಯಾಹ್ನ ವೇಳೆಗೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳಿಗೆ ನೀಡಿದ್ದರು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ಆರಂಭ ಆಗುತ್ತಿದ್ದಂತೆ ವಿಪಕ್ಷ ನಾಯಕ ಅಶೋಕ್, ಸುರೇಶ್ ಕುಮಾರ್, ರಾಜಣ್ಣ ಅವರು ಸಚಿವ ಸ್ಥಾನದ ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಆಕ್ಷೇಪಿಸಿದರು. ನೀವು ರಾಜಿನಾಮೆ ನೀಡಿದ್ದೀರಲ್ವಾ.. ಯಾಕೆ ಸಚಿವ ಸ್ಥಾನದ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂದು ತರಾಟೆ ತೆಗೆದರು. ಆದರೆ, ಆಡಳಿತ ಪಕ್ಷದ ನಾಯಕರು ರಾಜಿನಾಮೆ ನಿರಾಕರಿಸಿದ್ದರು.
ಸಂಜೆಯಾಗುತ್ತಿದ್ದಂತೆ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಲಾಗಿದೆ ಎಂಬ ಪತ್ರವು ರಾಜ್ಯಪಾಲರ ಕಚೇರಿಯಿಂದ ಸರ್ಕಾರಕ್ಕೆ ರವಾನೆಯಾಗಿದೆ. ರಾಜಣ್ಣ ರಾಜೀನಾಮೆ ನೀಡುವ ಮುನ್ನವೇ ಸರ್ಕಾರದ ಮುಖ್ಯಸ್ಥರಾದ ಸಿಎಂ ಸಿದ್ದರಾಮಯ್ಯ ಅವರು ವಜಾಕ್ಕೆ ನಿರ್ಧರಿಸಿ ರಾಜಭವನಕ್ಕೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ರಾಜಣ್ಣ ರಾಜಿನಾಮೆ ಬಿಸಾಕಿ ಕಲಾಪದಲ್ಲಿ ಕುಳಿತಿದ್ದರು.
ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ. ವಿಧಾನಸಭೆ ಕಲಾಪ ಮಧ್ಯಾಹ್ನದ ಭೋಜನ ವಿರಾಮದ ಸಂದರ್ಭದಲ್ಲಿ ಕೆ.ಎನ್ ರಾಜಣ್ಣ ರಾಜೀನಾಮೆ ಬಗ್ಗೆ ವದಂತಿ ಉಂಟಾಗಿದ್ದರಿಂದ ಟಿವಿಯಲ್ಲಿ ಸುದ್ದಿಯಾಗಿತ್ತು.
In a political twist that has stirred debate in Karnataka, senior Congress leader K.N. Rajanna was not a voluntary resignee from his ministerial post, but was in fact removed from the Cabinet on the instructions of the party high command.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm