ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿತ್ತು ಹಾಕಿದ ಹೈಕಮಾಂಡ್ ; ಸದ್ದಿಲ್ಲದೆ ರಾಜ್ಯಪಾಲರಿಗೆ ಪತ್ರ ರವಾನಿಸಿದ್ದ ಸಿಎಂ ಕಚೇರಿ, ಮತ ಕಳ್ಳತನ ಹೇಳಿಕೆ ಬಗ್ಗೆ ಸೀರಿಯಸ್ ಆ್ಯಕ್ಷನ್ ! 

11-08-25 11:01 pm       Bangalore Correspondent   ಕರ್ನಾಟಕ

ಕಾಂಗ್ರೆಸ್‌ ಹಿರಿಯ ನಾಯಕ ಕೆ‌.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಲ್ಲ, ಪಕ್ಷದ ಹೈಕಮಾಂಡ್ ಸೂಚನೆಯಂತೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ ಎನ್ನುವುದು ಬಹಿರಂಗವಾಗಿದ್ದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದ್ದು ಅದರಲ್ಲಿಯೇ ಕಿತ್ತುಹಾಕುವ ವಿಚಾರ ಉಲ್ಲೇಖವಾಗಿದೆ. 

ಬೆಂಗಳೂರು, ಆ.11 : ಕಾಂಗ್ರೆಸ್‌ ಹಿರಿಯ ನಾಯಕ ಕೆ‌.ಎನ್ ರಾಜಣ್ಣ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಲ್ಲ, ಪಕ್ಷದ ಹೈಕಮಾಂಡ್ ಸೂಚನೆಯಂತೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದೆ ಎನ್ನುವುದು ಬಹಿರಂಗವಾಗಿದ್ದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ರಾಜ್ಯಪಾಲರಿಂದ ಅಧಿಕೃತ ಪತ್ರ ರವಾನಿಸಲಾಗಿದ್ದು ಅದರಲ್ಲಿಯೇ ಕಿತ್ತುಹಾಕುವ ವಿಚಾರ ಉಲ್ಲೇಖವಾಗಿದೆ. 

ರಾಜ್ಯಪಾಲರ ವಿಶೇಷ ಕರ್ತವ್ಯಾಧಿಕಾರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಪತ್ರ ರವಾನೆಯಾಗಿದೆ. ಈ ಪತ್ರದಲ್ಲಿ " ಸಹಕಾರ ಸಚಿವ ಕೆಎನ್‌ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ " ಎಂದು ಉಲ್ಲೇಖಿಸಲಾಗಿದೆ. 

Why IAS Shalini & Rajneesh Deserve a Film Based on Their Incredible Work?

By Siddaramaiah, for Siddaramaiah': Karnataka LoP R Ashoka criticizes  Lokayukta over MUDA case | Bengaluru - Hindustan Times

ರಾಜಣ್ಣ ಅವರು ತಮ್ಮನ್ನು ಕಿತ್ತು ಹಾಕುವ ವಿಚಾರ ತಿಳಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ಸೋಮವಾರ ಮಧ್ಯಾಹ್ನ ವೇಳೆಗೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳಿಗೆ ನೀಡಿದ್ದರು. ಮಧ್ಯಾಹ್ನ ಮೂರು ಗಂಟೆಗೆ ಕಲಾಪ ಆರಂಭ ಆಗುತ್ತಿದ್ದಂತೆ ವಿಪಕ್ಷ ನಾಯಕ ಅಶೋಕ್, ಸುರೇಶ್ ಕುಮಾರ್, ರಾಜಣ್ಣ ಅವರು ಸಚಿವ ಸ್ಥಾನದ ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಆಕ್ಷೇಪಿಸಿದರು‌. ನೀವು ರಾಜಿನಾಮೆ ನೀಡಿದ್ದೀರಲ್ವಾ.. ಯಾಕೆ ಸಚಿವ ಸ್ಥಾನದ ಕುರ್ಚಿಯಲ್ಲಿ ಕುಳಿತಿದ್ದೀರಿ ಎಂದು ತರಾಟೆ ತೆಗೆದರು. ಆದರೆ, ಆಡಳಿತ ಪಕ್ಷದ ನಾಯಕರು ರಾಜಿನಾಮೆ ನಿರಾಕರಿಸಿದ್ದರು.  

Karnataka CM Siddaramaiah to move High Court against governor's nod to  prosecute him in MUDA 'scam':

ಸಂಜೆಯಾಗುತ್ತಿದ್ದಂತೆ ಕೆಎನ್‌ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಲಾಗಿದೆ ಎಂಬ ಪತ್ರವು ರಾಜ್ಯಪಾಲರ ಕಚೇರಿಯಿಂದ ಸರ್ಕಾರಕ್ಕೆ ರವಾನೆಯಾಗಿದೆ. ರಾಜಣ್ಣ ರಾಜೀನಾಮೆ ನೀಡುವ ಮುನ್ನವೇ ಸರ್ಕಾರದ ಮುಖ್ಯಸ್ಥರಾದ ಸಿಎಂ ಸಿದ್ದರಾಮಯ್ಯ ಅವರು ವಜಾಕ್ಕೆ ನಿರ್ಧರಿಸಿ ರಾಜಭವನಕ್ಕೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ರಾಜಣ್ಣ ರಾಜಿನಾಮೆ ಬಿಸಾಕಿ ಕಲಾಪದಲ್ಲಿ ಕುಳಿತಿದ್ದರು. 

ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿರುವುದು ವಿಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಿದೆ. ವಿಧಾನಸಭೆ ಕಲಾಪ ಮಧ್ಯಾಹ್ನದ ಭೋಜನ ವಿರಾಮದ ಸಂದರ್ಭದಲ್ಲಿ ಕೆ.ಎನ್ ರಾಜಣ್ಣ ರಾಜೀನಾಮೆ ಬಗ್ಗೆ ವದಂತಿ ಉಂಟಾಗಿದ್ದರಿಂದ ಟಿವಿಯಲ್ಲಿ ಸುದ್ದಿಯಾಗಿತ್ತು.

In a political twist that has stirred debate in Karnataka, senior Congress leader K.N. Rajanna was not a voluntary resignee from his ministerial post, but was in fact removed from the Cabinet on the instructions of the party high command.