ಬ್ರೇಕಿಂಗ್ ನ್ಯೂಸ್
16-08-25 09:58 pm Bangalore Correspondent ಕರ್ನಾಟಕ
ಬೆಂಗಳೂರು, ಆ.16 : ಜಗದೀಪ್ ಧನಕರ್ ದಿಢೀರ್ಉ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು ಬಿಹಾರ ರಾಜ್ಯಪಾಲ ಮೊಹಮದ್ ಆರಿಫ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಥೂರ್ ಮತ್ತು ಜಮ್ಮು -ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ದೆಹಲಿ ಲೆಫ್ಟಿಂನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.
ಉಪ ರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗೂ ಕಡಿಮೆ ಸಮಯವಿದ್ದು ಬಿಜೆಪಿ ತಮ್ಮ ಕಡೆಯಿಂದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಸರತ್ತು ಆರಂಭಿಸಿದೆ. ಈ ಮಧ್ಯೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಶೇಷಾದ್ರಿ ಚಾರಿ ಹೆಸರು ಕೂಡ ಮುಂಚೂಣಿಗೆ ಬಂದಿದೆ. ಈ ಮಧ್ಯೆ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ನಾರಾಯಣ್ ಅವರ ಹೆಸರೂ ಕೂಡ ಪರಿಗಣನೆಯಲ್ಲಿದೆ. ಉಪ ರಾಷ್ಟ್ರಪತಿ ಚುನಾವಣೆಗಾಗಿ ಒಂದು ತಿಂಗಳಿನಿಂದ ಹಲವು ರಾಜ್ಯಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ಮೂಲಗಳು ತಿಳಿಸಿವೆ.
ಕಳೆದ ಜುಲೈ 21ರಂದು ಆರೋಗ್ಯದ ಕಾರಣ ಮುಂದಿಟ್ಟು ಜಗದೀಪ್ ಧನಕರ್ ಹಠಾತ್ ರಾಜೀನಾಮೆ ನೀಡಿದ ನಂತರ ಉಪ ರಾಷ್ಟ್ರಪತಿ ಹುದ್ದೆ ತೆರವಾಗಿದೆ. ಧನಕರ್ ಅವರ ಹಠಾತ್ ರಾಜೀನಾಮೆಯ ಬಳಿಕ ಬಿಜೆಪಿಯಿಂದಲೇ ಆ ಹುದ್ದೆಗೆ ಆಯ್ಕೆ ಮಾಡುವ ವಿಷಯದಲ್ಲಿ ಪಕ್ಷ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.
ಈ ಮಧ್ಯೆ ಮಂಗಳವಾರ ಎನ್.ಡಿ.ಎ ಸಂಸದೀಯ ಸಮಿತಿ ಸಭೆ ನಿಗದಿಪಡಿಸಲಾಗಿದ್ದು, ಇದರಲ್ಲಿ ಹೆಸರು ಅಂತಿಮಗೊಳಿಸುವ ಸಾಧ್ಯತೆಯಿದೆ. ಬಿಹಾರ ಚುನಾವಣೆ ಮುಂದಿಟ್ಟು ಅಭ್ಯರ್ಥಿ ಫೈನಲ್ ಮಾಡಲಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಮುಸ್ಲಿಂ ಅನ್ನುವುದು ಸೇರಿದಂತೆ ಸದ್ಯಕ್ಕೆ ಬಿಹಾರ ರಾಜ್ಯಪಾಲರಾಗಿರುವುದು ಪ್ಲಸ್ ಪಾಯಿಂಟ್ ಆಗಿದೆ.
Following the sudden resignation of Jagdeep Dhankhar, the election for the post of Vice President of India has been scheduled for September 9. With less than a month to go, several prominent names have surfaced as potential candidates.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm