ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm