ಬ್ರೇಕಿಂಗ್ ನ್ಯೂಸ್
23-08-25 09:56 pm Bangalore Correspondent ಕರ್ನಾಟಕ
ಬೆಂಗಳೂರು, ಆ 23: ವಿಧಾನ ಪರಿಷತ್ತು ಅಕ್ರಮ ಗಣಿಗಾರಿಕೆಯಿಂದ ಊಹೆಗೂ ನಿಲುಕದಷ್ಟು ಪ್ರಮಾಣದಲ್ಲಿ ವಿದೇಶಗಳಿಗೆ ಅದಿರು ರವಾನೆ ಮಾಡಿದ್ದರಿಂದ ರಾಜ್ಯಕ್ಕೆ ₹80 ಸಾವಿರ ಕೋಟಿ ನಷ್ಟವಾಗಿದೆ. ಈ ಲೂಟಿ ಹಣ ವಸೂಲಿ ಮಾಡಲು ವಸೂಲಾತಿ ಆಯುಕ್ತರನ್ನು ನೇಮಿಸುತ್ತಿದ್ದೇವೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಹೇಳಿದರು.
ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪರ ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025 ಅನ್ನು ಮಂಡಿಸಿ ಮಾತನಾಡಿದರು.
2006ರಿಂದ 2012ರವರೆಗೆ ನಮ್ಮಲ್ಲಿರುವ ಮಾಹಿತಿ ಪ್ರಕಾರ 20 ಕೋಟಿ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಕಾನೂನು ಬಾಹಿರವಾಗಿ ಸಾಗಣೆಯಾಗಿದೆ. ಒಂದು ಟನ್ಗೆ ₹4003 ರಂತೆ ₹80 ಸಾವಿರ ಕೋಟಿಯಷ್ಟು ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದೆ. ಈ ಮೊತ್ತವನ್ನು ಜಪ್ತಿ ಅಥವಾ ವಸೂಲಿ ಮಾಡುವುದು ಜವಾಬ್ದಾರಿ ಯುತ ಸರ್ಕಾರದ ಕರ್ತವ್ಯ. ಅದಕ್ಕಾಗಿಯೇ ವಸೂಲಿ ಆಯುಕ್ತರ ನೇಮಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ ಎಂದರು.
ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಣೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಮಧ್ಯವರ್ತಿಗಳನ್ನೊಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆ ನಡೆದಿದೆ. ಈ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವ ಕೆಲಸವನ್ನು ವಸೂಲಾತಿ ಆಯುಕ್ತರು ಮಾಡಲಿದ್ದಾರೆ. ರಾಜ್ಯದಲ್ಲಿ ಭಾರಿ ಅಕ್ರಮ ಮತ್ತು ಮಧ್ಯಮ ಪ್ರಮಾಣದಲ್ಲಿ ಅಕ್ರಮ ಮಾಡಿದ 111 ಕಂಪನಿಗಳು 'ಬಿ' ಮತ್ತು 'ಸಿ' ಕೆಟಗರಿಯಲ್ಲಿದ್ದು, ಅವುಗಳ ಬಗ್ಗೆ ಎಸ್ಐಟಿ, ಸಿಬಿಐ ತನಿಖೆ ನಡೆಯುತ್ತಿದೆ ಎಂದು ಹೇಳಿದರು.
Karnataka has suffered an estimated loss of ₹80,000 crore due to large-scale illegal mining and unauthorized export of iron ore between 2006 and 2012, said Law and Parliamentary Affairs Minister H.K. Patil. To recover the lost public wealth, the state government is appointing a Recovery Commissioner, he added.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm