ಬ್ರೇಕಿಂಗ್ ನ್ಯೂಸ್
25-08-25 10:55 pm Bangalore Correspondent ಕರ್ನಾಟಕ
ಬೆಂಗಳೂರು, ಆ 25 : ಅನನ್ಯ ಭಟ್ ನಾಪತ್ತೆ ಪ್ರಕರಣದ ಬೆನ್ನು ಬಿದ್ದಿರುವ ಎಸ್ಐಟಿ ಅಧಿಕಾರಿಗಳ ತಂಡ ನಾಲ್ಕು ದಶಕದ ಹಿಂದಿನ ಮಾಹಿತಿ ಕಲೆ ಹಾಕುತ್ತಿದೆ. ತನಿಖಾಧಿಕಾರಿಗಳ ಮುಂದೆ ಗೊಂದಲದ ಹೇಳಿಕೆ ನೀಡುತ್ತಿರುವ ಸುಜಾತಾ ಭಟ್ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ದೂರುದಾರೆ ಸುಜಾತಾ ಭಟ್ ನೆಲೆಸಿರುವ ಬನಶಂಕರಿ ನಿವಾಸಕ್ಕೆ ಪೊಲೀಸರು ಬಂದೋಬಸ್ತ್ ಮುಂದುವರಿಸಿದ್ದಾರೆ. ಎಸ್ಐಟಿ ಅಧಿಕಾರಿಗಳ ನೋಟಿಸ್ಗೆ ಸುಜಾತಾ ಭಟ್, ಆರೋಗ್ಯದ ಕಾರಣ ನೀಡಿ ಆ.29ಕ್ಕೆ ಹಾಜರಾಗುವುದಾಗಿ ಹೇಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತನಿಖಾಧಿಕಾರಿಗಳು ಸುಜಾತಾ ಭಟ್ ಮನೆಯಲ್ಲಿಯೇ ಹೇಳಿಕೆ ಪಡೆಯಲಾಗುವುದು ಎಂದು ಹೇಳಿದ್ದಾರೆ. ಸುಜಾತಾ ಭಟ್ ಹಿನ್ನೆಲೆ ಹಾಗೂ ಉಡುಪಿ, ಬೆಂಗಳೂರಿನಲ್ಲಿ ನೆಲೆಸಿದ್ದರು, ಯಾರ ಜತೆ ವಾಸವಾಗಿದ್ದರು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.
2003ರಲ್ಲಿ ಅನನ್ಯ ಭಟ್ ಕಾಣೆಯಾದ ಸಂದರ್ಭದಲ್ಲಿ ಸುಜಾತಾ ಭಟ್ ಎಲ್ಲಿದ್ದರು? ಅವರ ಮಗಳು ಹೌದಾ ಅಥವಾ ಅಲ್ಲವೋ ಎಂಬ ಮಾಹಿತಿ ಸಂಗ್ರಹಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಬೆಳ್ತಂಗಡಿ, ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಹತ್ಯೆ ನಡೆಸಿ, ಶವಗಳನ್ನು ಮುಚ್ಚಿಹಾಕಿರುವ ಹುಡುಕಾಟದ ಸಂದರ್ಭದಲ್ಲಿ ಸುಜಾತಾ ಭಟ್ ಅವರು ನನ್ನ ಮಗಳು ಅನನ್ಯ ಭಟ್ ಳನ್ನ ಧರ್ಮಸ್ಥಳದಲ್ಲಿ ಕೊಲೆ ಮಾಡಿ ಹೂತು ಹಾಕಲಾಗಿದೆ ಎಂದು ನೀಡಿರುವ ಹೇಳಿಕೆ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು.
ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸುಜಾತಾ ಭಟ್ 3 ವರ್ಷಗಳಿಂದ ವಾಸಿಸುತ್ತಿದ್ದಾರೆ. ಮನೆಯ ಬಳಿ ಸಾರ್ವಜನಿಕರು, ಮಾಧ್ಯಮದವರು ಬಾರದಂತೆ ನಿರ್ಬಂಧ ಹೇರಿ, ಯಾರೂ ಮನೆಯ ಹತ್ತಿರ ಬರದಂತೆ ನೋಡಿಕೊಳ್ಳಿ ಎಂದು ಅವರು ಪೊಲೀಸರಿಗೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿವಾಸದ ಸುತ್ತ ಭದ್ರತೆ ಒದಗಿಸಿದ್ದಾರೆ. ಇವರ ಮನೆಗೆ ಎಸ್ಐಟಿ ಅಧಿಕಾರಿಗಳು ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮನೆಯ ಮುಂಭಾಗದಲ್ಲಿ 10ಕ್ಕೂ ಹೆಚ್ಚಿನ ಪೊಲೀಸರು ಬ್ಯಾರಿಕೇಡ್ ಹಾಕಲಾಗಿದೆ. ಸ್ಥಳದಲ್ಲಿ ಸಿಎಆರ್ ತುಕಡಿಯನ್ನೂ ನಿಯೋಜಿಸಲಾಗಿದೆ.
The Special Investigation Team (SIT) probing the mysterious disappearance of Ananya Bhat has issued a notice to Sujatha Bhat, who made sensational claims linking the case to the Dharmasthala region.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm