ಬ್ರೇಕಿಂಗ್ ನ್ಯೂಸ್
29-08-25 05:59 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಆ 29 : ಚಿಂತಾಮಣಿ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವುದು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ 57 ಹಂದಿಗಳನ್ನು ಸಾಯಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಹಂದಿ ಫಾರ್ಮ್ನಲ್ಲಿ ಆಗಸ್ಟ್ 19ರಿಂದ ಇಲ್ಲಿಯವರೆಗೂ 100 ಹಂದಿಗಳು ಸಾವನ್ನಪ್ಪಿವೆ. ಇದರಿಂದ ಎಚ್ಚೆತ್ತ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು. ಹಂದಿಗಳ ರಕ್ತದ ಸ್ಯಾಂಪಲ್ ಭೋಪಾಲ್ನ ರಾಷ್ಟ್ರೀಯ ಲ್ಯಾಬ್ಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಫಾರಂನಲ್ಲಿರುವ 57 ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ.
ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ರಂಗಪ್ಪ ಪ್ರತಿಕ್ರಿಯಿಸಿ, "ಕಳೆದೊಂದು ವಾರದಿಂದ ಫಾರ್ಮ್ನಲ್ಲಿ ಹಂದಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಲಾಗಿತ್ತು. ಹಂದಿ ಜ್ವರ ದೃಢಪಟ್ಟ ಕಾರಣ ಸದ್ಯ ಫಾರ್ಮ್ನಿಂದ ಹಂದಿಗಳ ಸಾಗಟವನ್ನು ನಿಷೇಧಿಸಲಾಗಿದೆ. ಆಫ್ರಿಕನ್ ಹಂದಿ ಜ್ವರ ಸಾಂಕ್ರಾಮಿಕ ರೋಗ. ದೇಶೀಯ ಮತ್ತು ಕಾಡು ಹಂದಿಗಳಿಗೆ ಈ ರೋಗ ಹರಡುತ್ತದೆ. ರೋಗಕ್ಕೆ ತುತ್ತಾದ ಹಂದಿಗಳು ಸಾವನ್ನಪ್ಪುತ್ತವೆ. ಈ ಜ್ವರಕ್ಕೆ ನಿರ್ದಿಷ್ಟ ಔಷಧಿ ಮತ್ತು ಚಿಕಿತ್ಸೆ ಇಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಜ್ವರ ದೃಢಪಟ್ಟ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಲ್ಲಲಾಗುತ್ತದೆ. ಸೋಂಕಿತ ಹಂದಿಗಳಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ" ಎಂದು ತಿಳಿಸಿದರು.
African Swine Fever (ASF) has been confirmed at a pig farm in Hebbari village, Chintamani taluk, prompting authorities to take strict precautionary measures. The Department of Animal Husbandry and Veterinary Services has decided to cull 57 pigs currently housed at the farm to contain the spread of the disease.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm