ಬ್ರೇಕಿಂಗ್ ನ್ಯೂಸ್
05-09-25 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5 : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ಆರೋಪ ಕೇಳಿಬಂದ ವಾರದ ಬಳಿಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆ ಜಾರಿಗೊಳಿಸಿದ್ದು ಯೋಜನೆಯಡಿ 60 ಎಕರೆ ಭೂಮಿ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು.
ಆದರೆ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿಬಂದಿದ್ದು ಕಮಿಷನ್ ಕೇಳಿದ್ದ ವಿಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಮಾತನಾಡಿದ್ದ ರವಿಕುಮಾರ್, ಆರೋಪಗಳನ್ನು ತಳ್ಳಿ ಹಾಕಿದ್ದರು. ಎಐ ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ನಿಗಮದ ಕಚೇರಿಯಲ್ಲಿಯೇ ವಿಡಿಯೊ ಚಿತ್ರೀಕರಿಸಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಮನವರಿಕೆ ಮಾಡಿಕೊಟ್ಟು ತನಿಖೆ ನಡೆಸಲು ಮನವಿ ಮಾಡಲಿದ್ದೇನೆ ಎಂದು ತಿಳಿಸಿದರು.
A week after allegations of large-scale commission collection surfaced in the Karnataka State Bhovi Development Corporation, its chairman S. Ravikumar has tendered his resignation. The move reportedly follows instructions from Chief Minister Siddaramaiah.
05-09-25 07:55 pm
Bangalore Correspondent
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:26 pm
Mangalore Correspondent
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am
Mangalore, Honey Trap, Kundapur, Crime: ಹುಡುಗ...
04-09-25 01:10 pm