ಬ್ರೇಕಿಂಗ್ ನ್ಯೂಸ್
08-09-25 05:21 pm HK News Desk ಕರ್ನಾಟಕ
ಮಂಡ್ಯ, ಸೆ.8 : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಇದರಿಂದ ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಎಲ್ಲೆಡೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಘಟನೆ ಪೂರ್ವ ನಿಯೋಜಿತ ಕೃತ್ಯ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದು, ಸದ್ಯ 21 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ದೂರು ಪಟ್ಟಣದ ಸಿದ್ಧಾರ್ಥ ನಗರ 5ನೇ ಕ್ರಾಸ್ ನಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆ ವೇಳೆ ಈ ಘಟನೆ ಸಂಭವಿಸಿದೆ. ಸೂಕ್ತ ಪೊಲೀಸ್ ಬಂದೋಬಸ್ತ್ ನಡುವೆ ಮೆರವಣಿಗೆ ಸಾಗುತ್ತಿದ್ದಾಗಲೇ ಕಲ್ಲು ತೂರಾಟ ನಡೆದಿದೆ. ಮಸೀದಿಯಲ್ಲಿದ್ದ ಮುಸ್ಲಿಮರು ಹೊರಬಂದಿದ್ದು, ಎರಡು ಕೋಮಿನವರ ನಡುವೆ ಮಾತಿನ ಚಕಮಕಿಯೊಂದಿಗೆ ಕಲ್ಲುತೂರಾಟ ನಡೆದಿದೆ. ಕೆಲ ಹೊತ್ತಿನಲ್ಲಿ ಸ್ಥಳದಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರು ಜಮಾಯಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಿದ್ದಾರೆ. ಘಟನೆ ಬೆನ್ನಲ್ಲೇ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸ್ಥಳಕ್ಕೆ ಆಗಮಿಸಿ ಎರಡು ಕೋಮಿನವರೊಂದಿಗೆ ಸಮಾಲೋಚಿಸಿ ಸಮಾಧಾನಪಡಿಸಿದ್ದಾರೆ. ಕಳೆದ ವರ್ಷ ನಾಗಮಂಗಲ ಪಟ್ಟಣದಲ್ಲಿ ಗಣೇಶನ ಮೂರ್ತಿ ವಿಸರ್ಜನೆ ವೇಳೆ ಮಸೀದಿ ಬಳಿಯೇ ಕಲ್ಲು ತೂರಾಟ ನಡೆದು, ಹತ್ತಾರು ಅಂಗಡಿ ಮುಂಗ್ಗಟ್ಟುಗಳಿಗೆ ಬೆಂಕಿ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಸಲ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಹಳ ಕಟ್ಟೆಚ್ಚರ ವಹಿಸಿತ್ತು.
ಘಟನೆ ಖಂಡಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶಗೊಂಡಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಪೊಲೀಸರು ಪ್ರತಿಭಟನಕಾರರನ್ನು ಮನವೊಲಿಸಿದ್ದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಕೈಬಿಟ್ಟಿದ್ದಾರೆ. ಘಟನೆ ಖಂಡಿಸಿ ಸೆಪ್ಟೆಂಬರ್ 09ರಂದು ಮದ್ದೂರು ಬಂದ್ ಕರೆ ಕೊಟ್ಟಿದ್ದು, ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳ ಮುಚ್ಚುವಂತೆ ವರ್ತಕರಿಗೆ ಮನವಿ ಮಾಡಿವೆ.
ಸೋಮವಾರ ಬೆಳಗ್ಗೆ ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮದ್ದೂರು ತಾಲೂಕು ಕಚೇರಿ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿದೆ. ಇದೇ ವೇಳೆ ಮದ್ದೂರು ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಲಾಠಿಚಾರ್ಜ್ ವೇಳೆ ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವೇಳೆ, ಮದ್ದೂರು ಗಲಾಟೆ ಘಟನೆ ಸಂಬಂಧಿಸಿ, ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪರಿಸ್ಥಿತಿ ಕೈಮೀರದಂತೆ ನಿಗಾ ವಹಿಸಿ. ಅಹಿತಕರ ಘಟನೆಗಳಿಗೆ ಅವಕಾಶ ನೀಡಬೇಡಿ. ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ ಎಂದು ಸೂಚನೆ ನೀಡಿದ್ದಾರೆ.
Tension gripped Maddur town in Mandya district after stone pelting broke out during a Ganesh idol immersion procession on Sunday evening. The incident occurred near a mosque in Siddharth Nagar 5th Cross, leading to clashes between two communities.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm