ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್​​ ಎಫೆಕ್ಟ್  ; ಬೆಂಗಳೂರಲ್ಲಿ 106 ಕೋಟಿ ರೂ. ದಂಡ ಕಲೆಕ್ಷನ್, 37 ಲಕ್ಷ ಪ್ರಕರಣ ಇತ್ಯರ್ಥ ! 

13-09-25 10:38 pm       Bangalore Correspondent   ಕರ್ನಾಟಕ

ಇ-ಚಲನ್‌ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ.

ಬೆಂಗಳೂರು, ಸೆ 13 : ಇ-ಚಲನ್‌ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿ ಮುಗಿದಿದ್ದು, ಬೆಂಗಳೂರಲ್ಲಿ ಬರೋಬ್ಬರಿ 106 ಕೋಟಿ ರೂ ದಂಡ ಸಂಗ್ರಹವಾಗಿದೆ.

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಘೋಷಿಸಲಾಗಿದ್ದ ಶೇ.50 ರಿಯಾಯಿತಿ ಅವಧಿಯ ಅಂತಿಮ ದಿನವಾದ ಸೆಪ್ಟೆಂಬರ್ 12ರ ದಿನದಾಂತ್ಯಕ್ಕೆ ಎಲ್ಲಾ ವಿಧಾನಗಳ ಮೂಲಕ ಒಟ್ಟು 37,83,173 ಪ್ರಕರಣಗಳು ಇತ್ಯರ್ಥವಾಗಿದ್ದು, 106 ಕೋಟಿ ರೂ. ದಂಡ ಸಂಗ್ರಹಣೆಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.

ಇ-ಚಲನ್‌ನ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಶೇ.50 ರಿಯಾಯಿತಿಯನ್ನ ರಾಜ್ಯ ಸರ್ಕಾರ ಘೋಷಿಸಿತ್ತು. ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್ (ಕೆಎಸ್​​​ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್‌ಸೈಟ್‌ನಲ್ಲಿ ವಾಹನದ ನೊಂದಣಿ ಸಂಖ್ಯೆಯನ್ನ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು.

ಅಲ್ಲದೆ ಹತ್ತಿರದ ಸಂಚಾರ ಪೊಲೀಸ್ ಠಾಣೆಗಳು, ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನ ನೀಡುವ ಮೂಲಕವೂ ಸಹ ದಂಡ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಎಲ್ಲ ವಿಧಾನಗಳ ಮೂಲಕ ಒಟ್ಟು 106 ಕೋಟಿ ರೂ ದಂಡವನ್ನು ವಾಹನ ಸವಾರರು ಪಾವತಿಸಿದ್ದಾರೆ. ಈ ಮೂಲಕ 50% ರಿಯಾಯಿತಿ ವ್ಯವಸ್ಥೆಗೆ ಉತ್ತಮ ಸ್ಪಂದನೆ ನೀಡಿದ್ದಾರೆ.

The 50% discount on pending traffic fines in Karnataka, which was offered between August 23 and September 12, has resulted in a whopping ₹106 crore collection in Bengaluru alone, according to the city's traffic police department.