ಬ್ರೇಕಿಂಗ್ ನ್ಯೂಸ್
16-09-25 11:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.16 : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4 ವರ್ಷಗಳಿಂದ ಆರ್ಥಿಕ ವ್ಯವಹಾರ ಹೊಂದಿರುವ ದಿನೇಶ್ ಗುಂಡೂರಾವ್ಗೆ ನೋಟಿಸ್ ನೀಡಿದ್ದು, ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ನೋಟಿಸ್ ಬೆನ್ನಲ್ಲೇ ದಿನೇಶ್ ಗುಂಡೂರಾವ್ ದಾಖಲೆ ಕ್ರೋಢೀಕರಿಸಲು ಕಾಲಾವಕಾಶ ಕೋರಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ಅಹ್ಮದ್ಗೆ 2.5 ಕೋಟಿ ರೂ. ನೀಡಿದ್ದ ವಿಚಾರವಾಗಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಈಗಾಗಲೇ ರಾಧಿಕಾ ಕುಮಾರಸ್ವಾಮಿ ಹಾಗೂ ಗುಜರಿ ಬಾಬು ವಿಚಾರಣೆ ನಡೆಸಲಾಗಿದೆ.
2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಜಮೀರ್ ಅಹ್ಮದ್ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.
ಇಡಿ ವರದಿ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ಸಂದರ್ಭದಲ್ಲಿ, ನಾನು 2012ರಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್ ಅಹ್ಮದ್ ಅವರಿಗೆ 2.5 ಕೋಟಿ ರೂ.ಗಳನ್ನು ಸಾಲವಾಗಿ ನೀಡಿದ್ದೆ ಎಂದು ರಾಧಿಕಾ ತಿಳಿಸಿದ್ದಾಗಿ ಮೂಲಗಳಿಂದ ತಿಳಿದುಬಂದಿದೆ.
In connection with the ongoing investigation into alleged illegal assets of Minister B.Z. Jamir Ahmed Khan, the Lokayukta police have issued a notice to Health Minister Dinesh Gundu Rao.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm