ಬ್ರೇಕಿಂಗ್ ನ್ಯೂಸ್
26-09-25 05:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.26 : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್ದೇವ್ ಅವರನ್ನೂ ಎಫ್ ಐಆರ್ ನಲ್ಲಿ ಸೇರಿಸಲಾಗಿದೆ. ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರಿಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರನ್ನು ಗಂಭೀರ ಪರಿಗಣಿಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್ಪಿ) ತನಿಖೆಗೆ ಆದೇಶ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿದೆ. ಈ ಆದೇಶದಂತೆ ಲೋಕಾಯುಕ್ತ ಕಚೇರಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 ( ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
The Lokayukta Police in Chikkamagaluru have registered an FIR against Sringeri Congress MLA T.D. Rajegowda, his wife Pushpa, and son Rajdev, on charges of corruption, misuse of power, and tax evasion.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm