ಬ್ರೇಕಿಂಗ್ ನ್ಯೂಸ್
27-09-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.27 : ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.
ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ಹೆಗಡೆಯವರು ಹೇಳಿದ್ದಾರೆ. ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ, ಸಮಯ ಸಂದರ್ಭ ಬರಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರ್ಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು. ಆನಂತರ ನಾನು ಮಾತನಾಡುತ್ತೇನೆ” ಎಂದು ತಿಳಿಸಿದರು.
ಸುಪ್ರೀಂ ಕೋರ್ಟಿನಲ್ಲಿ ಪಿಐಎಲ್ ವಜಾ ಆಗಿದ್ದರೂ ಸರ್ಕಾರದ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಈಗ ಆ ವಿಚಾರ ಚರ್ಚೆ ಬೇಡ. ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಹಾಕಿದ್ದು, ಅದು ವಜಾಗೊಂಡಿದೆ ಎಂದು ಹೇಳಿದರು.
ಪಿಐಎಲ್ ಹಾಕಿದವರಿಗೆ ಸ್ಥಳೀಯವಾಗಿ ತನಿಖೆ ಮಾಡಲಿ ಎಂದು ಕೋರ್ಟ್ ಬೈದು ಕಳುಹಿಸಿದ್ದು ಎಲ್ಲವೂ ಗೊತ್ತಿದೆ. ಸುಪ್ರೀಂ ಕೋರ್ಟಿನ ನಿರ್ದೇಶನದ ಬಗ್ಗೆ ಯಾರು ಹೇಳುವುದಿಲ್ಲ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದರು. ಅದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಆದರೆ ತನಿಖಾ ತಂಡದಿಂದ ಅಧಿಕೃತವಾಗಿ ನಮಗೆ ವರದಿ ಬರಲಿ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ಈಗಾಗಲೇ, ಬೆಳ್ತಂಗಡಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಅನ್ನು ಮಹೇಶ್ ಶೆಟ್ಟಿ ತಿಮರೋಡಿಗೆ ಜಾರಿ ಮಾಡಿದ್ದಾರೆ. ಕಳೆದ ಹತ್ತು ದಿನಗಳಿಂದ, ತಿಮರೋಡಿ ತಲೆಮರೆಸಿಕೊಂಡಿದ್ದಾರೆ. ಇವರ ಮನೆಯಲ್ಲಿ ಶಸ್ತ್ರಾಸ್ತ ಪತ್ತೆಯಾದ ಹಿನ್ನಲೆಯಲ್ಲಿ ನೋಟಿಸ್ ಜಾರಿಯಾಗಿತ್ತು. ಸೆಪ್ಟಂಬರ್ 29ಕ್ಕೆ ವಿಚಾರಣೆಗೆ ಬರಲು ಸೂಚಿಸಲಾಗಿತ್ತು, ಒಂದು ವೇಳೆ ಅಂದೂ ಬರದಿದ್ದರೆ, ಬಂಧನಕ್ಕೆ ಆದೇಶ ಹೊರಬೀಳುವ ನಿರೀಕ್ಷೆಯಿದೆ.
ಇನ್ನೊಂದು ಕಡೆ, ಧರ್ಮಸ್ಥಳದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು, ವಿಶೇಷ ತನಿಖಾ ದಳದ ಅರ್ಧ ವರದಿ ಬಂದಿರುವ ಮಾಹಿತಿಯಿದೆ. ನಾವು ಯಾವುದೇ ತಪ್ಪು ಮಾಡದಿದ್ದರೂ, ನಮ್ಮ ಮೇಲೆ ದಬ್ಬಾಳಿಕೆ ನಡೆದಿರುವುದು ನನಗೆ ಆಶ್ಚರ್ಯ ಮತ್ತು ನೋವನ್ನು ತಂದಿದೆ ಎಂದು ಹೇಳಿದ್ದಾರೆ.
Deputy Chief Minister D.K. Shivakumar has once again clarified that the government’s sole intention in the Dharmasthala case is to present the facts before the people. Speaking to the media at his residence in Sadashivanagar, he said that he would respond in detail only after the Special Investigation Team (SIT) submits its report.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm