ಬ್ರೇಕಿಂಗ್ ನ್ಯೂಸ್
27-09-25 02:40 pm HK News Desk ಕರ್ನಾಟಕ
ದಾವಣಗೆರೆ, ಸೆ.27 : 'ಐ ಲವ್ ಮೊಹಮ್ಮದ್ʼ ಪ್ಲೆಕ್ಸ್ಗಳ ಹಾವಳಿ ರಾಜ್ಯಕ್ಕೂ ಕಾಲಿಟ್ಟಿದೆ. ಇದರ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಪೋಸ್ಟರ್ ಹಾಕಿದ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಅನಗತ್ಯವಾಗಿ ಕೋಮು ದ್ವೇಷ ಪ್ರಚೋದಿಸುವ ಉದ್ದೇಶದಿಂದ ಈ ಫ್ಲೆಕ್ಸ್ ಹಾಕಿದ್ದಾರೆ ಎಂದು ಆರೋಪ ಕೇಳಿಬಂದಿದೆ. ದಾವಣಗೆರೆಯ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ನಲ್ಲಿ ಗಲಾಟೆಯಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ. ಮನೆಯೊಂದರ ಮುಂದೆ ʼಐ ಲವ್ ಮೊಹಮ್ಮದ್ʼ ಎಂದು ಪ್ಲೆಕ್ಸ್ ಹಾಕಿದ್ದನ್ನು ಅಲ್ಲಿನ ಮನೆಯವರು ಪ್ರಶ್ನಿಸಿದ್ದಕ್ಕೆ ಗಲಾಟೆಯಾಗಿದೆ.
ಫ್ಲೆಕ್ಸ್ಗೆ ಬ್ಲೇಡ್ ಹಾಕಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಿದ್ದು, ಒಂದು ಸಮುದಾಯದ 500-600 ಜನ ಬಂದು ಗಲಾಟೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪರಸ್ಪರ ಚಕಮಕಿ ಆಗಿದ್ದು, ಗಾಯಗೊಂಡವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
'ಐ ಲವ್ ಮೊಹಮ್ಮದ್' ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ಸ್ಥಳದಲ್ಲಿ ಬಿಗುವಿನ ಸ್ಥಿತಿ ಇದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಉರೂಸ್ ಯಾತ್ರೆ ವೇಳೆ 'ಐ ಲವ್ ಮೊಹಮ್ಮದ್' ಎಂಬ ಪೋಸ್ಟರ್ ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದರು. ಇದು ಒಂದು ಟ್ರೆಂಡ್ ಆಗಿದ್ದು, ನಂತರ ಹಿಂದೂಗಳನ್ನು ಕೆರಳಿಸಲು ಮುಸ್ಲಿಂ ಕಿಡಿಗೇಡಿಗಳು ಇದನ್ನು ಒಂದು ಅಭಿಯಾನವಾಗಿ ನಡೆಸಲಾರಂಭಿಸಿದ್ದರು. ಜಾರ್ಖಂಡ್, ಬಿಹಾರ ಸೇರಿದಂತೆ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಗಲಾಟೆಗೂ ಕಾರಣವಾಗಿತ್ತು. ವಿವಾದಕ್ಕೆ ಕಾರಣವಾಗಿದ್ದು ಹಿಂದೂಗಳು ಇದಕ್ಕೆ ಪ್ರತಿಯಾಗಿ 'ಐ ಲವ್ ಮಹಾದೇವ್' ಎಂಬ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದರು. ಇದೀಗ ಈ ವಿವಾದ ಹಲವು ರಾಜ್ಯಗಳಿಗೆ ಹಬ್ಬಿದೆ.
Tension gripped Davanagere after an “I Love Mohammad” flex put up in front of a house sparked a clash between two communities. The confrontation led to stone-pelting, leaving four people injured, who are now receiving treatment at the district hospital. Police have intensified security in the area and launched a search to trace those behind the posters, which have triggered similar controversies in other states before spreading to Karnataka.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm