ಬ್ರೇಕಿಂಗ್ ನ್ಯೂಸ್
29-09-25 02:49 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.29 : ಹಿಂದಿನ ಸರ್ಕಾರಕ್ಕಿಂತ ನಿಮ್ಮ ನೇತೃತ್ವದ ಸರ್ಕಾರದಲ್ಲಿ ಬಿಲ್ ಪಾವತಿಗೆ ಕಮಿಷನ್ ದುಪ್ಪಟ್ಟಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಗುತ್ತಿಗೆದಾರರ ಸಂಘ ಪತ್ರ ಬರೆದಿದೆ.
ತಾವು ವಿರೋಧ ಪಕ್ಷದ ನಾಯಕರಾಗಿದ್ದಾಗ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಯಾವುದೇ ಕಮಿಷನ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೀರಿ. ಆದರೆ, ಹಿಂದಿನ ಸರ್ಕಾರಕ್ಕಿಂತ ಎಲ್ಲ ಇಲಾಖೆಗಳಲ್ಲೂ ಈಗ ಕಮಿಷನ್ ದುಪ್ಪಟ್ಟು ಆಗಿದೆ ಎಂದು ನಿಮ್ಮ ಗಮನಕ್ಕೆ ತರಲು ಸಂಘ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯದಲ್ಲಿ ಹಿಂದಿದ್ದ ಬಿಜೆಪಿ ನೇತೃತ್ವದ ಸರ್ಕಾರಕ್ಕಿಂತ ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ, ಅಧಿಕಾರಿಗಳು ಹೆಚ್ಚು ಕಮಿಷನ್ ಪಡೆಯುತ್ತಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘ 2025ರ ಮಾರ್ಚ್ನಲ್ಲಿ ಆರೋಪಿಸಿತ್ತು. ಆಗ ಮುಖ್ಯಮಂತ್ರಿಯವರು ಗುತ್ತಿಗೆದಾರರೊಂದಿಗೆ ಸಭೆ ನಡೆಸಿ, ಏಪ್ರಿಲ್ನಲ್ಲಿ ಶೇ 50ರಷ್ಟು ಬಾಕಿ ಬಿಲ್ ಬಿಡುಗಡೆ ಮಾಡುವ ಭರವಸೆ ನೀಡಿದ್ದರು.
ಸುಮಾರು ಎರಡು ವರ್ಷಗಳಿಂದ ಗುತ್ತಿಗೆದಾರರಿಗೆ ಬಾಕಿ ಇರುವ ಹಣ ಬಿಡುಗಡೆ ವಿಚಾರ ಮತ್ತು ಹಲವು ಸಮಸ್ಯೆಗಳ ಬಗ್ಗೆ ನಿಮ್ಮ ಜೊತೆ ಹಲವು ಬಾರಿ ಸಂಘದ ಪದಾಧಿಕಾರಿಗಳು ಚರ್ಚೆ ಮಾಡಿದ್ದೇವೆ. ನಮ್ಮ ಸಂಘವು ಭ್ರಷ್ಟಾಚಾರದ ವಿರುದ್ಧ ಹೋರಾಡಿದ ಫಲವಾಗಿ, ತಮ್ಮ ಸರ್ಕಾರ ಬರುವುದಕ್ಕೆ ಸ್ವಲ್ಪವಾದರೂ ನಾವು ಕಾರಣಕರ್ತರಾಗಿದ್ದೇವೆ ಎಂಬುದನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ ಎಂದು ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಪತ್ರದಲ್ಲಿ ತಿಳಿಸಿದ್ದಾರೆ.
The Karnataka State Contractors’ Association has written to Chief Minister Siddaramaiah alleging that commission rates for bill payments have doubled under the present Congress government compared to the previous BJP regime. The association reminded the CM of his earlier assurance that no commissions would be taken once his government came to power.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm