ಬ್ರೇಕಿಂಗ್ ನ್ಯೂಸ್
30-09-25 01:08 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಧ್ಯಕ್ಷರಾಗಿ ನಿಕೇತರಾಜ್ ಮೌರ್ಯ ಅವರನ್ನು ಎರಡೇ ದಿನದಲ್ಲಿ ಬದಲಿಸಲಾಗಿದೆ. ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದ ವಿ.ಎಸ್. ಆರಾಧ್ಯ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನಿಕೇತ್ ರಾಜ್ ಮೌರ್ಯ ಅವರಿಗೆ ಇದೀಗ ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಆಮೂಲಕ ಅವರಿಗೆ ಒಮ್ಮೆ ಸ್ಥಾನ ಕೊಟ್ಟು ಮತ್ತೆ ಡಿಮೋಷನ್ ಮಾಡಿದಂತಾಗಿದೆ.
ಸೆ.25ರಂದು ಬಿಎಂಟಿಸಿ ಅಧ್ಯಕ್ಷರನ್ನಾಗಿ ನಿಕೇತ್ರಾಜ್ ಮೌರ್ಯ ಅವರನ್ನು ನೇಮಕ ಮಾಡಲಾಗಿತ್ತು. ಬಳಿಕ ನಿಕೇತ್ರಾಜ್ ಮೌರ್ಯ ಅಧಿಕಾರವನ್ನೂ ಸ್ವೀಕಾರ ಮಾಡಿದ್ದರು. ಆದರೆ, ಸೆ.29ರಂದು ಅವರನ್ನು ಬಿಎಂಟಿಸಿ ಉಪಾಧ್ಯಕ್ಷರನ್ನಾಗಿ ಮರು ನೇಮಿಸಿ ಆದೇಶದಲ್ಲಿ ತಿಳಿಸಲಾಗಿದೆ. ಬಿಎಂಟಿಸಿ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದ ವಿ.ಎಸ್.ಆರಾಧ್ಯ ಅವರನ್ನು ಅಧ್ಯಕ್ಷರನ್ನಾಗಿ ಮರು ನೇಮಿಸಲಾಗಿದೆ. ನಿಕೇತ್ ರಾಜ್ ಮೌರ್ಯ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪರವಾಗಿ ಮಾಧ್ಯಮ ಡಿಬೇಟ್ ನಲ್ಲಿ ಪ್ರಮುಖವಾಗಿ ಗುರುತಿಸಿದ್ದರು. ಪ್ರಚಾರ ಸಂದರ್ಭದಲ್ಲಿಯೂ ಪ್ರಬಲ ಭಾಷಣಕಾರರಾಗಿ ಕೆಲಸ ನಿಭಾಯಿಸಿದ್ದರು.
ಇದಲ್ಲದೆ, ಇತರ 5 ನಿಗಮ ಮಂಡಳಿಗಳಿಗೂ ಹೊಸತಾಗಿ ಅಧ್ಯಕ್ಷರನ್ನು ನೇಮಿಸಲಾಗಿದೆ. ತೀವ್ರ ಲಾಬಿ, ಕೆಲವರ ವಿರೋಧ ಕೇಳಿಬಂದಿದ್ದರಿಂದ ಸಿಎಂ ಸಿದ್ದರಾಮಯ್ಯ ಈ ಬದಲಾವಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ಸೈಯದ್ ಮೆಹಮೂದ್ ಚಿಸ್ತಿ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ಶರಣಪ್ಪ ಸಲಾದ್ ಪುರ್, ರಾಜ್ಯ ಬೀಜ ನಿಗಮ ನಿಯಮಿತ ಅಧ್ಯಕ್ಷರನ್ನಾಗಿ ಆಂಜನಪ್ಪ, ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೀಲಕಂಠರಾವ್ ಎಸ್. ಮೂಲಗೆ ಹಾಗೂ ಜವಾಹರ ಬಾಲಭವನ ಸೊಸೈಟಿ ಉಪಾಧ್ಯಕ್ಷರನ್ನಾಗಿ ಅನಿಲ್ ಕುಮಾರ್ ಜಮಾದಾರ್ ಅವರನ್ನು ನೇಮಿಸಿ ಹೊಸ ಆದೇಶ ಮಾಡಲಾಗಿದೆ.
Nikethraj Maurya, who had recently assumed charge as BMTC Chairman, has been replaced within two days and reassigned as Vice-Chairman. V.S. Aradhya has been appointed as the new Chairman. The government has also announced fresh appointments to five other state corporations.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm