ಬ್ರೇಕಿಂಗ್ ನ್ಯೂಸ್
04-10-25 07:22 pm HK News Staffer ಕರ್ನಾಟಕ
ಬೆಳಗಾವಿ, ಅ 04: ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ, ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ (ಅ.4) ನಸುಕಿನ 4ಕ್ಕೆ ಹೃದಯಾಘಾತವಾಯಿತು.
ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (ಮರಣದಲ್ಲಿಯೂ ಒಂದಾದ ಸಹೋದರರು*24) ಕೂಡ ಕುಸಿದು ಬಿದ್ದ. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ್ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣವೇ ಬಸವರಾಜನು ಸಹಿತ ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕೂಡ ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.
ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
In a heart-wrenching incident from Kaparatti village in Gokak taluk of Belagavi district, two brothers died within moments of each other—one after suffering a heart attack, and the other from the shock of hearing the news. Satish Bagannavar (16), a Class 10 (SSLC) student, suffered a sudden heart attack at around 4 AM on Saturday, October 4. His condition was reported as critical.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm