ಬ್ರೇಕಿಂಗ್ ನ್ಯೂಸ್
04-10-25 10:16 pm HK News Desk ಕರ್ನಾಟಕ
ವಿಜಯಪುರ, ಅ 04 : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಿತ್ತಾಟ ಆರೋಪಗಳನ್ನು ಪ್ರತಿಪಕ್ಷ ಬಿಜೆಪಿ ತೀವ್ರಗೊಳಿಸಿದೆ. ನಾಯಕತ್ವ ಗೊಂದಲ ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.
ಈ ಕುರಿತು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, "ರಾಜ್ಯಕ್ಕೆ ಶಾಶ್ವತ ಸಿಎಂ ಬೇಕು" ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ಇದೇ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಆರ್. ಅಶೋಕ್ ಸವಾಲೆಸೆದಿದ್ದಾರೆ.
ನಮಗೆ ಶಾಶ್ವತ ಮುಖ್ಯಮಂತ್ರಿಯ ಅಗತ್ಯವಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಜಗಳದಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ಬಿಜೆಪಿ ಇದನ್ನು ಸಹಿಸಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಾಲಾವಣೆ ಆಗುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಿಸಬೇಕು" ಎಂದು ಆರ್. ಅಶೋಕ್ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆಯೋ ಇಲ್ಲವೋ ಎಂಬದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸ್ಪಷ್ಟಪಡಿಸಬೇಕು. ಈ ಕುರಿತು ಸ್ಪಷ್ಟನೆ ಸಿಗುವವರೆಗೂ ಜನರು ಅಭಿವೃದ್ಧಿಯಿಂದ ವಂಚಿತರಾಗಬೇಕಾಗುತ್ತದೆ. ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ" ಎಂದು ಆರ್. ಅಶೋಕ್ ಗಡುಗಿದರು.
ಮುಂದುವರೆದು, ರಾಜ್ಯವನ್ನು ಯಾರು ಮುನ್ನಡೆಸುತ್ತಿದ್ದಾರೆ ಎಂಬುದರ ಬಗ್ಗೆ ಜನರಲ್ಲಿ ಗೊಂದಲವಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಹೇಳುವವರು ಕೇಳುವವರು ಯಾರೂ ಇಲ್ಲವಾಗಿದೆ. ಇಷ್ಟಾದರೂ ರಾಜ್ಯ ಕಾಂಗ್ರೆಸ್ ತನ್ನ ಕುರ್ಚಿ ಕಿತ್ತಾಟವನ್ನು ಮುಂದುವರೆಸಿರುವುದು ನಾಚಿಕೆಗೇಡಿನ ಸಂಗತಿ" ಎಂದು ವಿಧಾನಸಭೆ ಪ್ರತಿಪಕ್ಷ ನಾಯಕರು ಹರಿಹಾಯ್ದರು.
ಮುಂಬರುವ ನವೆಂಬರ್ ಇಲ್ಲವೇ ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಇಳಿಯುವುದು ಖಚಿತ. ಆದರೆ, ಸಿದ್ದರಾಮಯ್ಯ ಸುಲಭವಾಗಿ ಅಧಿಕಾರ ಬಿಟ್ಟುಕೊಡುವ ವ್ಯಕ್ತಿಯಲ್ಲ. ಈ ಅಧಿಕಾರ ಜಗಳ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಈಗಾಗಲೇ ಅಧಿಕಾರಕ್ಕಾಗಿ ಜಗಳ ಆರಂಭವಾಗಿದೆ. ಸಿದ್ದರಾಮಯ್ಯ ಅವರದ್ದು ಅಧಿಕಾರ ಬಿಟ್ಟುಕೊಡುವ ಜಾಯಮಾನ ಅಲ್ಲ. ಆದರೆ ಡಿ ಕೆ ಶಿವಕುಮಾರ ಹಠ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯ ಅವರು ಯಾವಾಗ ನಿರ್ಗಮಿಸುತ್ತಾರೆಂದು ಕೇಳುತ್ತಿದ್ದಾರೆ. ಸಿದ್ದರಾಯ್ಯ ಬಳಿಕ ಮುಂದಿನ ಸಿಎಂ ಯಾರಾಗುತ್ತಾರೆಂಬುದರ ಕುರಿತು ಗುಸುಗುಸುಗಳು ಎರಡೂವರೆ ವರ್ಷಗಳಿಂದ ಕೇಳಿಬರುತ್ತಲೇ ಇದೆ. ಶಿವಕುಮಾರ್, ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಹೆಸರುಗಳು ಓಡಾಡುತ್ತಿದೆ. ಒಂದು ವೇಳೆ ಈ ಸರಕಾರ ಬಿದ್ದುಹೋದರೆ ನಾವು ಹಿಂದಿನಂತೆ ಸರಕಾರ ರಚನೆ ಮಾಡುವ ಆಸಕ್ತಿ ಹೊಂದಿಲ್ಲ. ಬದಲಾಗಿ ಚುನಾವಣೆಗೆ ಹೋಗುವ ತಯಾರಿ ಮಾಡುತ್ತೇವೆ ಎಂದು ತಿಳಿಸಿದರು.
Amid growing speculation over leadership change in Karnataka, Opposition leader R. Ashoka launched a sharp attack on the Congress government, accusing CM Siddaramaiah and DyCM D.K. Shivakumar of stalling the state’s development with their ongoing power struggle. Speaking in Vijayapura, Ashoka demanded that Congress high command, including AICC chief Mallikarjun Kharge and Rahul Gandhi, clarify who will lead the state.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm