ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am