ಬ್ರೇಕಿಂಗ್ ನ್ಯೂಸ್
05-10-25 07:38 pm HK News Desk ಕರ್ನಾಟಕ
ಮೈಸೂರು, ಅ.5 : ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯನವರು ಬಹಳ ಆತುರದಲ್ಲಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಖರ್ಗೆ, ಡಿಕೆಶಿಗಿಂತ ಮುಂದೆ ಸಾಗಿ ರ್ಯಾಂಪ್ ವಾಕ್ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ರು. ಕಾಂಗ್ರೆಸಿನ ಹಿರಿಯ ಸಚಿವರುಗಳೇ ಆಕ್ಟೋಬರ್ ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಸಿ ವೇಣಿಗೋಪಾಲ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ, ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ನಾಯಕತ್ವ ಬದಲಾವಣೆ ಆಗೊಲ್ಲ ಎಂದು ಎಲ್ಲಿಯೂ ಹೇಳಿಲ್ಲ.
ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ಬಹುತೇಕ ರಾಜಕೀಯ ಬದಲಾವಣೆ ಆಗಲಿದೆ. ರಾಜ್ಯಲ್ಲಿ ರಾಜಕೀಯ ಅಲ್ಲೋಲ ಕಲ್ಲೋಲ ಆಗೋದು ಸ್ಪಷ್ಟವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ವಿಚಾರದ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಡಿಕೆಶಿಯವರ ಪ್ರತಿಕ್ರಿಯೆ ನೋಡಿದಾಗಲೇ ಗೊತ್ತಾಗುತ್ತದೆ. ಸುಮಾರು 60 ಪ್ರಶ್ನೆಗಳನ್ನ ಜನರ ಮುಂದೆ ಇಟ್ಟಿದ್ದಾರೆ. ಇಷ್ಟೊಂದು ಪ್ರಶ್ನೆ ಯಾಕೆಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ. ದಿನೇ ದಿನೇ ಇದರಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲೂ ಸಾಕಷ್ಟು ಗೊಂದಲ ಉಂಟಾಗಿವೆ. ಯಾವುದೇ ಪೂರ್ವ ತಯಾರಿ ಇಲ್ಲದೆ ಆತುರಾತುರವಾಗಿ ಸರ್ಕಾರ ನಿರ್ಣಯ ಕೈಗೊಂಡಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಏಕೆ.? ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ ಗಣತಿಗೂ ಸಂಬಂಧ ಇದೆಯಾ ಎಂದು ಚರ್ಚೆ ಯಾಗುತ್ತಿದೆ.
ಈಗಾಗಲೇ ಪ್ರಧಾನ ಮಂತ್ರಿಗಳು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ಜಾತಿ ಜನಗಣತಿಗೆ ಆದೇಶಿಸಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಠಿ ಮಾಡುವ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.
BJP state president B.Y. Vijayendra has claimed that Karnataka will witness major political changes following the Bihar elections. Criticizing Chief Minister Siddaramaiah for being in haste, he recalled Congress’s internal power tussles and remarks by senior leaders on possible leadership change.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm