ಬ್ರೇಕಿಂಗ್ ನ್ಯೂಸ್
06-10-25 05:27 pm HK News Desk ಕರ್ನಾಟಕ
ಹಾಸನ, ಅ.6 : ದೇಶದ ಬೇರೆ ರಾಜ್ಯಗಳಲ್ಲಿ ಕಾಫ್ ಸಿರಫ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಗುಣಮಟ್ಟದ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್ ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿ ಕಾಫ್ ಸಿರಫ್ಗಳ ಟೆಸ್ಟ್ಗೆ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್ ಸಿರಫ್ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್ ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕರ್ನಾಟಕದಲ್ಲಿ ಸಿರಪ್ ಪೂರೈಕೆ ಆಗಿಲ್ಲ
ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಫ್ ಅನ್ನು ಕರ್ನಾಟಕದಲ್ಲಿ ಸರಬರಾಜು ಮಾಡಲಾಗಿಲ್ಲ. ಹಾಗಾಗಿ ರಾಜ್ಯದಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವರು, ಔಷಧಿ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೇರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಪ್ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಸಾಮಾನ್ಯ ಶೀತಕ್ಕೆಲ್ಲ ಕಾಫ್ ಸಿರಪ್ ನೀಡಬೇಕಾಗಿಲ್ಲ. ಈ ಬಗ್ಗೆ ಪೋಷಕರು ಕೂಡ ಜಾಗೃತಿ ಹೊಂದಬೇಕೆಂದು ಸಲಹೆ ನೀಡಿದರು.
ಕಲಬೆರಕೆ ಪತ್ತೆಗೆ ಕೇಂದ್ರಕ್ಕೆ ಪತ್ರ ಬರೆದಿದ್ದೆವು
ಕೆಲ ಔಷಧಿಗಳ ಕಲಬೆರಕೆ, ನಕಲಿ ಔಷಧಿ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ ʼವೆಬ್ಸೈಟ್ʼ ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ- ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್ ಇದೇ ವೇಳೆ ಹೇಳಿದರು.
In the wake of child deaths in other states due to substandard cough syrups, Karnataka Health Minister Dinesh Gundu Rao has assured that no such syrups have been supplied in the state. Speaking in Hassan, he said precautionary measures have been taken with all syrup samples from different companies collected for testing.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm