ಬ್ರೇಕಿಂಗ್ ನ್ಯೂಸ್
07-10-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ಈ ಮೂಲಕ ಅಕ್ಟೋಬರ್ 7 ಕ್ಕೆ ಮುಕ್ತಾಯವಾಗಬೇಕಿದ್ದ ರಜೆ ಅಕ್ಟೋಬರ್ 18ವರೆಗೂ ವಿಸ್ತರಣೆಯಾಗಿದೆ. ಇನ್ನು ಶಾಲೆಗಳು ಪುನರಾರಂಭವಾಗುವುದು ಅಕ್ಟೋಬರ್ 23ಕ್ಕೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಜಾತಿ ಗಣತಿ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಕೈಗೊಂಡಿದ್ದಾರೆ. ನಿಗದಿತ ಕಾಲಾವಧಿಯಲ್ಲಿ ಜಾತಿ ಗಣತಿ ಕಾರ್ಯ ಪೂರ್ಣಗೊಂಡಿಲ್ಲ. ಗಣತಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ
ಶಾಲಾ ಶಿಕ್ಷಕರ ಮನವಿ ಮೇರೆಗೆ ಕ್ರಮ;
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ 8 ವರ್ಕಿಂಗ್ ಡೇಸ್ ರಜೆ ಘೋಷಿಸಲಾಗಿದೆ. ಜತೆಗೆ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿಯನ್ನು ನಡೆಸಿ ಸರಿದೂಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪಿಯು ಉಪನ್ಯಾಸಕರಿಗೆ ಸಮೀಕ್ಷೆಯಿಂದ ವಿನಾಯ್ತಿ
ಅಕ್ಟೋಬರ್ 12 ರಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.
1.2 ಲಕ್ಷ ಶಿಕ್ಷಕರು ಸಮೀಕ್ಷೆಯಲ್ಲಿ;
ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.
The Karnataka government has extended Dasara holidays for government and aided schools until October 18, following the extension of the state’s caste census deadline. Originally scheduled to end on October 7, the break will now continue for an additional 10 days, with schools set to reopen on October 23.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm