CM Siddaramaiah, DK Shivakumar:ಶಾಸಕರ ಬೆಂಬಲವಿಲ್ಲದೆ, ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದವಿಲ್ಲದೆ ಯಾರೂ ಸಿಎಂ ಆಗಲು ಸಾಧ್ಯವಿಲ್ಲ ; ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ 

13-10-25 10:09 pm       HK News Desk   ಕರ್ನಾಟಕ

ಪಕ್ಷದ ಶಾಸಕರ ಬೆಂಬಲವಿಲ್ಲದೆ ಮತ್ತು ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದವಿಲ್ಲದೆ ಯಾರೂ ಸಿಎಂ ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಬಾಗಲಕೋಟ, ಅ.13 : ಪಕ್ಷದ ಶಾಸಕರ ಬೆಂಬಲವಿಲ್ಲದೆ ಮತ್ತು ಕಾಂಗ್ರೆಸ್ ಹೈಕಮಾಂಡ್ ಆಶೀರ್ವಾದವಿಲ್ಲದೆ ಯಾರೂ ಸಿಎಂ ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರ್ಣಗೊಳಿಸಲಿದ್ದು, ಈ ವೇಳೆ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ರಚನೆಯ ಮಾತುಗಳು ಕೇಳಿಬರುತ್ತಿದೆ. ಇದನ್ನೇ "ನವೆಂಬರ್ ಕ್ರಾಂತಿ" ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ, "ನಾನು ಅಂತಹ ವಿಷಯಗಳಿಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ. ಶಾಸಕರು ಮತ್ತು ಹೈಕಮಾಂಡ್ ಎರಡೂ ಬಹಳ ಮುಖ್ಯ. ಶಾಸಕರ ಬೆಂಬಲವಿಲ್ಲದೆ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಶಾಸಕರ ಬೆಂಬಲದ ಜೊತೆಗೆ ಹೈಕಮಾಂಡ್‌ ಆಶೀರ್ವಾದವೂ ಅಗತ್ಯ ಎಂದು ಸಿದ್ದರಾಮಯ್ಯ ತಿಳಿಸಿದರು.

ಹೈಕಮಾಂಡ್ ನಿರ್ಧಾರದ ಮೇಲೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಡೆಯಬಹುದು. ಇದಕ್ಕೆ ಶಾಸಕರ ಬೆಂಬಲದ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೀಡಿದ್ದ ಹೇಳಿಕೆಯ ಕುರಿತು ಕೇಳಿದ ಪ್ರಶ್ನೆಗೆ ಸಿಎಂ ಈ ರೀತಿ ಪ್ರತಿಕ್ರಿಯೆ ನೀಡಿದರು. ನವೆಂಬರ್ ಕ್ರಾಂತಿಯ ಬಗ್ಗೆ ಕೇಳಿದಾಗ, "ಕ್ರಾಂತಿ, ಬ್ರಾಂತಿ ಏನೂ ಇಲ್ಲ. ಎಲ್ಲಾ ಭ್ರಮೆ" ಎಂದು ಹೇಳಿದರು.

ಡಿಕೆಶಿ ಹೇಳಿಕೆ ಕುರಿತ ಪ್ರಶ್ನೆಗೆ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮಲ್ಲಿ ಒಂದು ನಿಯಮ ಇದೆ. ಸರ್ಕಾರ ಮಾಡುವಾಗ, ಸಿಎಲ್‌ಪಿ ಲೀಡರ್ ನೇಮಕ ಮಾಡುವಾಗ ಶಾಸಕರ ಅಭಿಪ್ರಾಯ ಕೇಳಲು ಹೈಕಮಾಂಡ್‌ನಿಂದ ವೀಕ್ಷಕರು ಬರುತ್ತಾರೆ. ಅವರು ಶಾಸಕರ ಅಭಿಪ್ರಾಯ ಪಡೆದು, ಅದನ್ನು ಹೈಕಮಾಂಡ್‌ಗೆ ತಿಳಿಸುತ್ತಾರೆ. ಯಾರಿಗೆ ಸಿಎಂ ಆಗುವ ಮೆಜಾರಿಟಿ ಬಂದಿದೆ ಎಂದು ಆ ನಂತರ ಹೆಸರು ಘೋಷಣೆ ಮಾಡುತ್ತಾರೆ. ಸಿದ್ದರಾಮಯ್ಯ ಮೊದಲ ಬಾರಿ ಮತ್ತು ಎರಡನೇ ಬಾರಿ ಸಿಎಂ ಆದಾಗಲೂ ಇದೇ ರೀತಿಯ ಪ್ರಕ್ರಿಯೆ ನಡೆದಿದೆ ಎಂದರು.

Karnataka Chief Minister Siddaramaiah stated that no one can become Chief Minister without the support of party legislators and the approval of the Congress high command. His remarks came in response to Deputy CM DK Shivakumar’s earlier statement suggesting that leadership change could occur based solely on the high command’s decision.