ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಮನೆ, ಬಾರ್ ಅಂಡ್ ರೆಸ್ಟೋರೆಂಟ್ ಗೆ ಎಸ್ಐಟಿ ದಾಳಿ, ಬರಿಗೈಲಿ ಮರಳಿದ ಪೊಲೀಸರು, ಅಕ್ರಂ ಮನೆಯಲ್ಲಿ ರಾಶಿ ರಾಶಿ ವೋಟರ್ ಐಡಿ ಪತ್ತೆ  

17-10-25 08:39 pm       HK News Desk   ಕರ್ನಾಟಕ

2023ರ ಚುನಾವಣೆಯಲ್ಲಿ ಅಳಂದ ಮತಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಶುಕ್ರವಾರ ಆಳಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ನಿವಾಸದ ಮೇಲೆ ದಾಳಿ ನಡೆಸಿದೆ.

ಕಲಬುರಗಿ, ಅ.17 : 2023ರ ಚುನಾವಣೆಯಲ್ಲಿ ಅಳಂದ ಮತಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಶುಕ್ರವಾರ ಆಳಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ನಿವಾಸದ ಮೇಲೆ ದಾಳಿ ನಡೆಸಿದೆ. ಬೆಳಗ್ಗಿನಿಂದ ಸಂಜೆಯ ವರೆಗೆ ಸುಭಾಷ್ ಗುತ್ತೇದಾರ್ ಮನೆ, ಅವರಿಗೆ ಸೇರಿದ ಬಾರ್ ಅಂಡ್ ರೆಸ್ಟೋರೆಂಟ್ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. 

ಡಿವೈಎಸ್ಪಿ ಅಲ್ಸಾನ್ ಬಾಷಾ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ಕಲಬುರ್ಗಿಯ ಗುಬ್ಬಿ ಕಾಲೋನಿಯಲ್ಲಿರುವ ಗುತ್ತೇದಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅನ್ನಪೂರ್ಣ ಕ್ರಾಸ್ ನಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗೂ ದಾಳಿ ನಡೆಸಿದ್ದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಪರಿಶೀಲನೆ ಮಾಡಿ ಬರಿಗೈಲಿ ವಾಪಸಾಗಿದ್ದಾರೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿ ಹಣಕಾಸು ವಹಿವಾಟಿನಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಮಲ್ಲಿಕಾರ್ಜುನ ಮಹಾಂತಗೋಳ್ ಅವರ ನಿವಾಸದ ಮೇಲೂ ಎಸ್‌ಐಟಿ ದಾಳಿ ನಡೆಸಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆಗೆ ಮಲ್ಲಿಕಾರ್ಜುನ ಅವರು, ಅಕ್ರಂ ಎಂಬ ವ್ಯಕ್ತಿ‌ಗೆ ಡೀಲ್ ಕೊಟ್ಟಿದ್ದರು ಎಂದು ಹೇಳಲಾಗಿದ್ದು ಹೀಗಾಗಿ ಎಸ್​ಐಟಿ ಮಲ್ಲಿಕಾರ್ಜುನ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ನಿನ್ನೆಯಷ್ಟೇ ಎಸ್​ಐಟಿ ಅಧಿಕಾರಿಗಳು ಕಲಬುರಗಿಯಲ್ಲಿ ಅಕ್ರಂ ಎನ್ನುವಾತನ ಮನೆ ಮೇಲೆ ದಾಳಿ ಮಾಡಿತ್ತು. ಈ ವೇಳೆ ರಾಶಿ ರಾಶಿ ವೋಟರ್ ಐಡಿಗಳು ಪತ್ತೆ ಆಗಿದ್ದವು. ಒಟ್ಟು 15 ಮೊಬೈಲ್ ಫೋನ್, 7 ಲ್ಯಾಪ್​ ಟಾಪ್​​ಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇಂದು ಎಸ್​ಐಟಿ, ಬಿಜೆಪಿ ಮಾಜಿ ಶಾಸಕರ ಮನೆ ಮೇಲೂ ದಾಳಿ ನಡೆಸಿದೆ. ಕಳೆದ ಚುನಾವಣೆ ವೇಳೆ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ದೂರು ನೀಡಿದ್ದು, ಈ ಸಂಬಂಧ ಎಫ್​ಐಆರ್ ದಾಖಲಾಗಿತ್ತು.

The Special Investigation Team (SIT) probing the alleged Aland constituency vote scam during the 2023 Karnataka Assembly elections conducted raids on former BJP MLA Subhash Guttedar’s residence and his bar & restaurant in Kalaburagi on Friday.