ಬ್ರೇಕಿಂಗ್ ನ್ಯೂಸ್
21-10-25 09:45 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡ (ಎಸ್ಐಟಿ) ವ್ಯಾಪ್ತಿಗೆ ತರಬೇಕು. ಅಲ್ಲದೆ, ಎಲ್ಲ ಪ್ರಕರಣಗಳ ತನಿಖೆ ತಾರ್ಕಿಕ ಅಂತ್ಯ ಆಗೋವರೆಗೂ ಎಸ್ಐಟಿ ಮುಂದುವರಿಸಬೇಕು ಎಂದು ಮಹಿಳಾ ಹೋರಾಟಗಾರರು ಮತ್ತು ಲೇಖಕಿಯರ ಬಳಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
'ಕೊಂದವರು ಯಾರು ಆಂದೋಲನ'ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ಎಲ್ಲ ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯದ ಸಿಗೋವರೆಗೂ ಎಸ್ಐಟಿ ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿತು.
ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ 'ಕೊಂದವರು ಯಾರು ಆಂದೋಲನ'ಕ್ಕಾಗಿ ವೇದಿಕೆ ರಚಿಸಿಕೊಂಡಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕೋರಿದರು.
ಆಂದೋಲನದ ಪ್ರಮುಖರಾದ ಚಂಪಾವತಿ, ಮಧುಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತ ಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.
Women’s rights activists and writers under the banner of the “Kondavaru Yaaru Andolana” movement met Chief Minister Siddaramaiah, urging that all cases of atrocities and unnatural deaths involving women in Dharmasthala be brought under the purview of the Special Investigation Team (SIT).
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm