ಬ್ರೇಕಿಂಗ್ ನ್ಯೂಸ್
21-10-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಬಿಹಾರ ಚುನಾವಣೆಗಾಗಿ ಕರ್ನಾಟಕದಲ್ಲಿ ಸಚಿವರು ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಬಿಜೆಪಿಯನ್ನು ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಸಂಪನ್ಮೂಲಗಳನ್ನು 'ಹೈಕಮಾಂಡ್ಗೆ ತಿರುಗಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಮತ್ತು ಕಾಂಗ್ರೆಸ್ಗೆ ಅಲ್ಲ' ಎಂದು ಹೇಳಿದ್ದಾರೆ.
'ಎಕ್ಸ್'ನಲ್ಲಿ ವಿಡಿಯೋ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, 'ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿವಂಗತ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ' ಎಂದಿದ್ದಾರೆ.
ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಹೇಳಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು ಎಂದಿದ್ದಾರೆ.
ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಕಿಡಿಕಾರಿದ್ದಾರೆ. ಸೋಮವಾರ ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ, ಪ್ರವಾಹ ಪರಿಹಾರ ನಿಧಿ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು.
Responding to BJP’s allegations that Congress ministers were collecting funds for the Bihar elections, Karnataka Minister Priyank Kharge hit back, stating that it was the BJP that diverted Karnataka’s resources to its central leadership. Sharing a video on X, Kharge reminded that former CM Yediyurappa and late Ananth Kumar had themselves spoken of paying ₹1,800 crore to the BJP high command.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm