ಬ್ರೇಕಿಂಗ್ ನ್ಯೂಸ್
30-10-25 04:34 pm Bangalore Correspondent ಕರ್ನಾಟಕ
ಬೆಂಗಳೂರು, ಅ.30 : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಾರೆ ಎಂದು ಘೋಷಿಸುವಂತೆ ಅಹಿಂದ ಸಂಘಟನೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಒತ್ತಾಯಿಸಿವೆ.
ನಾಯಕತ್ವ ಬದಲಾವಣೆಯ ಕುರಿತ ಊಹಾಪೋಹಗಳಿಗೆ ಅಂತ್ಯ ಹಾಡಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿವಿಧ ಅಹಿಂದ ಸಂಘಟನೆಗಳ ಪ್ರತಿನಿಧಿಗಳು ಬುಧವಾರ ಪತ್ರಗಳನ್ನು ಬರೆದಿದ್ದಾರೆ.
ನವೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಲಿದ್ದು ಇದೇ ವೇಳೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಅಹಿಂದ ಸಂಘಟನೆಗಳು ನಗರದ ರಾಮಸ್ವಾಮಿ ವೃತ್ತದಲ್ಲಿರುವ ಅಂಚೆ ಪೆಟ್ಟಿಗೆ ಬಳಿ ಪತ್ರ ಚಳವಳಿ ನಡೆಸಿದವು. '2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಹಿಂದ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ 135 ಸ್ಥಾನಗಳನ್ನು ಗೆದ್ದಿತ್ತು. ಇದು ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಗೆ ಕಾರಣವಾಯಿತು. ಈ ದೊಡ್ಡ ಮಟ್ಟದ ಗೆಲುವಿಗೆ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ಅಹಿಂದ ಸಮುದಾಯಗಳ ಒಗ್ಗಟ್ಟು ಕಾರಣ' ಎಂದು ಅಹಿಂದ ಸಂಘಟನೆಗಳು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ತಿಳಿಸಿವೆ.
'ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ನೆಲೆ ತುಂಬಾ ಬಲಿಷ್ಠವಾಗಿದ್ದು, ಇದಕ್ಕೆ ಪ್ರಮುಖ ಕಾರಣ ಸಿದ್ದರಾಮಯ್ಯ ಅವರ ಆಡಳಿತ, ಜನಪರ ಖಾತರಿ ಯೋಜನೆ, ಅಹಿಂದ ಸಮುದಾಯಗಳ ಮೇಲಿನ ಅವರ ಪ್ರೀತಿ ಮತ್ತು ಕಾಳಜಿ, ಸಾಮಾಜಿಕ ನ್ಯಾಯದ ಸಿದ್ಧಾಂತ, ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಅವರ ಕೊಡುಗೆಗಳು ಮತ್ತು ಎಲ್ಲರಿಗೂ ಸಮಾನತೆಯ ತತ್ವದಲ್ಲಿ ಅವರ ನಂಬಿಕೆ' ಎಂದು ಅದು ಹೇಳಿದೆ.
Various AHINDA (Backward Classes, Dalits, and Minorities) organizations have written a letter to Congress leader Rahul Gandhi, urging him to officially declare Chief Minister Siddaramaiah as the head of the Karnataka government for the entire five-year term.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm