ಬ್ರೇಕಿಂಗ್ ನ್ಯೂಸ್
30-10-25 06:22 pm HK News Desk ಕರ್ನಾಟಕ
ಕಲಬುರ್ಗಿ, ಅ.30 : ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ಕುರಿತ ರಿಟ್ ಅರ್ಜಿ ಬಗ್ಗೆ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು. ಅ.28ರಂದು ನಡೆದ ಶಾಂತಿಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಭದ್ರತೆ ಏರ್ಪಡಿಸಲು ಮತ್ತು ಸಂಘಟನೆಗಳ ಜೊತೆ ಮಾತುಕತೆ ನಡೆಸಲು ನ.5ರ ವರೆಗೆ ಕಾಲಾವಕಾಶ ನೀಡಬೇಕು ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಳಿಕೊಂಡಿದ್ದು ಇದರಂತೆ ಹೈಕೋರ್ಟ್ ವಿಚಾರಣೆಯನ್ನು ನ.7ಕ್ಕೆ ಮುಂದೂಡಿದೆ.
ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವಕೇಟ್ ಜನರಲ್ ಕಚೇರಿಯಲ್ಲಿಯೇ ಮತ್ತೊಂದು ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು ಅದಕ್ಕೆ ಎರಡೂ ಕಡೆಯವರು ಒಪ್ಪಿಗೆ ನೀಡಿದ್ದಾರೆ. ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೊನ್ನೆಯ ಶಾಂತಿ ಸಭೆಗೆ ಅರ್ಜಿದಾರರೇ ಹಾಜರಾಗಿರಲಿಲ್ಲ. ವಿವಾದ ಶೀಘ್ರ ಮುಗಿಸಲು ಅರ್ಜಿದಾರರೇ ಸಹಕರಿಸುತ್ತಿಲ್ಲ. ಬೇರೆ ವ್ಯಕ್ತಿಗಳು ಹಾಜರಾಗಿದ್ದಾರೆ ಎಂದು ಆಕ್ಷೇಪ ಸಲ್ಲಿಸಿದರು. ಅರ್ಜಿದಾರರ ಮನೆಯಲ್ಲಿ ಸಾವು ಸಂಭವಿಸಿದ್ದರಿಂದ ಅವರು ಬಂದಿರಲಿಲ್ಲ ಎಂದು ಅರ್ಜಿದಾರರ ಪರವಾಗಿ ವಕೀಲ ಅರುಣ್ ಶ್ಯಾಮ್ ತಿಳಿಸಿದರು.
ಅರ್ಜಿದಾರರೇ ಶಾಂತಿ ಸಭೆಗೆ ಹಾಜರಾಗದ್ದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರರು ಬರಲಾಗದಿದ್ದರೆ ಅವರ ವಕೀಲರು ಸಭೆಗೆ ಹಾಜರಾಗಬಹುದಿತ್ತು. ನೀವು ಅರ್ಹತೆ ಮೇಲೆ ವಾದ ಮಂಡಿಸಿ. ಯಾರಿಗೆ ವಿಚಾರ ಗೊತ್ತಿರುತ್ತದೆ, ಅವರೇ ಶಾಂತಿ ಸಭೆಗೆ ಹಾಜರಾಗಬೇಕಿತ್ತು. ನಾವು ಹೇಳಿದ್ದಕ್ಕೂ ಒಂದು ಕಾರಣವಿರುತ್ತದೆ ಎಂದು ತಿಳಿಯಬೇಕಿತ್ತು ಎಂದು ಜಡ್ಜ್ ತಿಳಿಸಿದರು.
ಅರ್ಜಿದಾರರ ಪರ ವಕೀಲರಿಗೆ ಆಹ್ವಾನವಿರಲಿಲ್ಲ. ಮತ್ತೊಂದು ಸಭೆ ನಡೆಸಿದರೆ ಹಾಜರಾಗುತ್ತೇವೆ ಎಂದು ಅರುಣ್ ಶಾಮ್ ತಿಳಿಸಿದರು. ಆಗ ಎಜಿ ಶಶಿಕಿರಣ್ ಶೆಟ್ಟಿ ನವೆಂಬರ್ 5ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ಸಿದ್ಧರಿದ್ದೇವೆ. ಸಮಸ್ಯೆ ಬಗೆಹರಿಸುವುದಷ್ಟೇ ನಮ್ಮ ಉದ್ದೇಶವಾಗಿದೆ. ಹಾಗಾಗಿ ನವೆಂಬರ್ 5 ರಂದು ಮತ್ತೆ ಶಾಂತಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
The Kalaburagi Bench of the Karnataka High Court heard a writ petition related to the RSS (Rashtriya Swayamsevak Sangh) Path Sanchalan in Chittapur. The court noted that a final decision could not be reached during the peace meeting held on October 28.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm