ಬ್ರೇಕಿಂಗ್ ನ್ಯೂಸ್
07-11-25 09:59 pm HK News Desk ಕರ್ನಾಟಕ
ಮೈಸೂರು, ನ.7 : ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ನಮ್ಮ ಪಕ್ಷದಲ್ಲಿ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇವೆ. ಹೀಗಾಗಿ ಕಾಂಗ್ರೆಸ್ ಸರ್ಕಾರದಲ್ಲಿ ಯಾವ ಬದಲಾವಣೆಯೂ ಅಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್ ಯಾವಾಗಲೂ ದೇವರ ಜೊತೆ ಮಾತನಾಡುತ್ತೇನೆ ಎನ್ನುತ್ತಾರೆ. ದೇವರು ಅವರಿಗೆ ಏನೇನು ಹೇಳಿದ್ದಾರೋ ನಮಗೇನು ಗೊತ್ತು. 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 20, 10 ವರ್ಷ ನಾವೇ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. 2028ಕ್ಕೆ ಏನೇನಾಗುತ್ತೊ ಯಾರಿಗೆ ಗೊತ್ತು ಬಿಡಿ ಎಂದು ಮೈಸೂರಿನಲ್ಲಿ ಕುಮಾರಸ್ವಾಮಿ, ಡಿಕೆಶಿ ಹೇಳಿಕೆ ಬಗ್ಗೆ ಲೇವಡಿ ಮಾಡಿದ್ದಾರೆ.
ರೈತರ ಪ್ರತಿಭಟನೆ ನೋಡಿದ್ರೆ ಸರ್ಕಾರದ ವಿರುದ್ಧ ಆಕ್ರೋಶವಿದೆ ಅಂತ ಕಾಣುತ್ತದೆ. ಯಾವ ಪುರುಷಾರ್ಥಕ್ಕೆ ಸರ್ಕಾರ ನಡೆಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಸಿದ್ದರಾಮಯ್ಯ ಸೀನಿಯರ್ ಲೀಡರ್ ಇದ್ದಾರೆ. ಎರಡು ಬಾರಿ ಸಿಎಂ ಆಗಿದ್ದಾರೆ ಡಿಸಿಎಂ ಆಗಿದ್ರು ಹೆಚ್ಚು ಬಜೆಟ್ ಮಂಡನೆ ಮಾಡಿದ ಖ್ಯಾತಿ ಇದೆ. ಆದ್ರೆ ಸಿಎಂಗೆ ಕನಿಷ್ಠ ಏನು ತೀರ್ಮಾನ ಮಾಡಬೇಕು ಅಂತ ಗೊತ್ತಿಲ್ವಾ. ಮೀಟಿಂಗ್ ಕರೆದಿದ್ದಾರೆ ಅಂತೆ. ಇದು ನಾವು ಮಾಡುವ ತೀರ್ಮಾನ ಅಲ್ಲ. ಸಿಎಂ ಮಾಡುವ ತೀರ್ಮಾನ. ಸಣ್ಣ ವಿಷಯವನ್ನು ದೊಡ್ಡದು ಮಾಡಿದ್ದಾರೆ.
ಪ್ರಧಾನಿಗಳು ಮಧ್ಯ ವಹಿಸಬೇಕು ಅಂತ ಪತ್ರ ಬರೆದಿದ್ದಾರೆ. ಕಬ್ಬು ಬೆಳೆಗೆ ಬೆಲೆ ನಿಗದಿ ಮಾಡಲು ಯಾವ ಸಿಎಂಗಳು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯಗೆ ರೈತರ ಸಮಸ್ಯೆ ಬಗೆಹರಿಸುವ ಜವಾಬ್ದಾರಿ ಇದೆ. ನಾನೇ ಎರಡು ಬಾರಿ ಸಿಎಂ ಆಗಿದ್ದೆ. ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದ್ದೆ. ಎರಡು ಸಂದರ್ಭದಲ್ಲೂ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ನಾನೇ ಬಗೆಹರಿಸಿದ್ದೇನೆ. ಕೇಂದ್ರ ಸರಕಾರವನ್ನ ಮಧ್ಯಕ್ಕೆ ತರಲಿಲ್ಲ. ಸಿಎಂ ಮಾಡುವ ಕೆಲಸವನ್ನ ಪ್ರಧಾನ ಮಂತ್ರಿಗಳ ಮೇಲೆ ಹೇಳ್ತಿದ್ದಾರೆ ಎಂದರು.
ಮೂರು ಪಕ್ಷಗಳಲ್ಲಿ ಸಕ್ಕರೆ ಮಾಲೀಕರಿದ್ದಾರೆ ಅನ್ನುವ ಆರೋಪವಿದೆ. ನಮ್ಮ ಪಕ್ಷದಲ್ಲಿ ಬಂಡಪ್ಪ ಕಾಶಪ್ಪನವರ್ ಕಾರ್ಖಾನೆ ಇಟ್ಟುಕೊಂಡಿದ್ರು. ಈಗ ಅವರು ಮಾರಾಟ ಮಾಡಿದ್ದಾರೆ. ನಮ್ಮ ಪಕ್ಷದಲ್ಲಿ ಯಾರು ಸಕ್ಕರೆ ಕಾರ್ಖಾನೆ ಮಾಲೀಕರು ಇಲ್ಲ. ಇವರ ತಪ್ಪಿಗೆ ಪ್ರಧಾನಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರ ಮಾಡಿದ್ದಾರೆ. ಅದಕ್ಕೆ ಪತ್ರ ಬರೆದಿದ್ದಾರೆ ಅಷ್ಟೇ. ಕೇಂದ್ರ ಸರ್ಕಾರ ಈಗಾಗಲೇ ಎಫ್.ಆರ್.ಪಿ ದರ ನಿಗದಿ ಮಾಡಿದೆ. ಸಿದ್ದರಾಮಯ್ಯ ಅವ್ರು
ರೈತರು ಹಾಗೂ ಕಾರ್ಖಾನೆ ಮಾಲೀಕರ ಜೊತೆ ಮೀಟಿಂಗ್ ಮಾಡಿದ್ರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಕಾಂಗ್ರೆಸ್ ಸರಕಾರದಲ್ಲಿ ಹಣದ ಕೊರತೆ ಇದ್ರೆ ನನ್ನ ಸರ್ಕಾರದಲ್ಲಿ ಹಣದ ಕೊರತೆ ಇದೆ ಅಂತ ಸಿಎಂ ಹೇಳಬೇಕು. ಅದನ್ನು ಬಿಟ್ಟು ಕೇಂದ್ರದ ಕಡೆ ಬೊಟ್ಟು ಮಾಡೋದು ಸರಿಯಲ್ಲ. ರಾಜ್ಯದ ಖಜಾನೆ ಖಾಲಿಯಾಗಿಲ್ಲ. ಜನರು ಖಜಾನೆ ತುಂಬಿಸುತ್ತಾರೆ. ಆದ್ರೆ ಕಾಂಗ್ರೇಸ್ ಸರ್ಕಾರದವರು ಗ್ಯಾರಂಟಿಗಳಿಗೆ ಹಣ ಕೊಡ್ತಿದ್ದಾರೆ. ಗ್ಯಾರಂಟಿ ಸ್ಕೀಮ್ ಉಸ್ತುವಾರಿ ನೋಡಿಕೊಳ್ಳಲು ಕ್ಯಾಬಿನೆಟ್ ಮಟ್ಟದ ಸ್ಥಾನಮಾನ ಕೊಟ್ಟು ದುಡ್ಡು ವೆಚ್ಚ ಮಾಡ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
Union Minister H.D. Kumaraswamy dismissed talks of political change in Karnataka, saying, “No revolution or upheaval will happen in November. I know Siddaramaiah’s nature very well. I understood his character back when he was in our party.”
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm