ಬ್ರೇಕಿಂಗ್ ನ್ಯೂಸ್
08-11-25 12:38 pm HK News Desk ಕರ್ನಾಟಕ
ಕಲಬುರಗಿ, ನ.8: ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಿರುವ ಆರ್ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸುವಂತೆ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಆರ್ ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್ ಅವರು, ಕಲಬುರಗಿ ಜಿಲ್ಲಾಡಳಿತ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಿ ಸಮಸ್ಯೆ ಶಾಂತಿಯುತ ಇತ್ಯರ್ಥಕ್ಕೆ ಸೂಚಿಸಿದ್ದಾರೆ. ಒಂದು ವೇಳೆ ವಿಫಲವಾದರೆ, ನ್ಯಾಯಾಲಯವೇ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದಾರೆ. ಅಲ್ಲದೆ, ಅಂದು ನ್ಯಾಯಾಲಯಕ್ಕೆ ದಿನ ನಿಗದಿಪಡಿಸಿದ ವಿವರಗಳೊಂದಿಗೆ ಬರುವಂತೆ ನಿರ್ದೇಶಿಸಿದ್ದಾರೆ.
ಚಿತ್ತಾಪುರದಲ್ಲಿ ಆರ್ಎಸ್ಎಸ್ಗೆ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಡೆಸಲು ಕಲಬುರ್ಗಿ ಜಿಲ್ಲಾಡಳಿತಕ್ಕೆ 11 ಅರ್ಜಿಗಳು ಬಂದಿವೆ ಮತ್ತು ಹೆಚ್ಚಿನ ಸಂಘಟನೆಗಳು ಆರ್ಎಸ್ಎಸ್ ಪಥ ಸಂಚಲನ ನಡೆಸುವ ದಿನದಂದೇ ಅನುಮತಿ ಕೇಳಿವೆ ಎಂದರು.
ಜಿಲ್ಲಾಡಳಿತವು ಈ ಸಂಘಟನೆಗಳಿಗೆ ಬೇರೆ ಬೇರೆ ದಿನಾಂಕಗಳನ್ನು ನೀಡುತ್ತದೆ. ಒಂದು ವಾರದೊಳಗೆ ಜಿಲ್ಲಾಡಳಿತವು ವಿವಿಧ ಸಂಸ್ಥೆಗಳಿಗೆ ರೂಟ್ ಮಾರ್ಚ್ ನಡೆಸುವ ದಿನಾಂಕಗಳನ್ನು ನಿಗದಿಪಡಿಸಲಿದೆ. ವರದಿಯನ್ನು ಸಲ್ಲಿಸಲು ಒಂದು ವಾರದ ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೇಳಿಕೊಂಡರು. ಆರ್ಎಸ್ಎಸ್ ಪರವಾಗಿ ವಾದಿಸಿದ ವಕೀಲ ಅರುಣ್ ಶ್ಯಾಮ್, ನವೆಂಬರ್ 13 ಅಥವಾ 16 ರಂದು ಆರ್ಎಸ್ಎಸ್ ಪಥ ಸಂಚಲನ ನಡೆಸಲು ಅವಕಾಶ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು.
The Karnataka High Court, Kalaburagi Bench, has directed the Kalaburagi district administration to allocate separate dates for different organizations, including the RSS, that have applied to conduct route marches (patha sanchalans) in Chittapur town.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm