ಬ್ರೇಕಿಂಗ್ ನ್ಯೂಸ್
20-11-25 03:01 pm Bangalore Correspondent ಕರ್ನಾಟಕ
ಬೆಂಗಳೂರು, ನ 20 : ಕೊಟ್ಟ ಮಾತಿನಂತೆ ನಡೆಯುವವರು ಸಿಎಂ ಸಿದ್ದರಾಮಯ್ಯ. ನನ್ನಣ್ಣನಿಗೆ ಅದೃಷ್ಟ ಇದ್ದರೆ ಸಿಎಂ ಆಗ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಮಾರ್ಮಿಕ ಮಾತು ಆಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಎಲ್ಲದಕ್ಕೂ ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡುತ್ತದೆ ಎಂದರು.
ಕೊಟ್ಟ ಮಾತಿನಂತೆ ನಡೆಯುವವರು ಸಿದ್ದರಾಮಯ್ಯ. ಸಿದ್ದರಾಮಯ್ಯಗೂ ಜವಾಬ್ದಾರಿ ಇದೆ. ಸಿದ್ದರಾಮಯ್ಯ ಯಾರಿಗೂ ಕೊಟ್ಟ ಮಾತಿಗೆ ತಪ್ಪಿಲ್ಲ. ಹಿಂದಿನ ಸರ್ಕಾರದಲ್ಲಿ ಕೂಡ ಮಾತಿನ ಪ್ರಕಾರವೇ ನಡೆದಿದ್ದಾರೆ. ಈಗಿನ ಸರ್ಕಾರದಲ್ಲೂ ಕೂಡ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದಾರೆ ಹಾಗೂ ಮುಂದೆಯೂ ಕೊಟ್ಟ ಮಾತಿನ ಪ್ರಕಾರವೇ ನಡೆದುಕೊಳ್ಳುತ್ತಾರೆ ಎಂದರು.
ಶ್ರಮಕ್ಕೆ ಫ್ರತಿಫಲ ಖಂಡಿತವಾಗಿ ಇದೆ. ಅದಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು. ಒಂದಲ್ಲ ಒಂದು ದಿನ ಡಿಕೆ ಶಿವಕುಮಾರ್ ಶ್ರಮಕ್ಕೆ ಪ್ರತಿಫಲ ಸಿಗುತ್ತದೆ ಕಾದು ನೋಡಬೇಕು ಎಂದು ಹೇಳಿದರು.
ಭರವಸೆ ಮೇಲೆಯೇ ನಾವೆಲ್ಲ ಬದುಕುತ್ತಾ ಇರುವುದು. ನಂಬಿಕೆ ಮೇಲೆಯೇ ಇರುವುದು ಎಲ್ಲರೂ. ನನಗೇನಾದರೂ ಒಳ್ಳೆಯದಾಗತ್ತೆ ಎಂದೇ ನೀವೂ ಕೆಲಸ ಮಾಡ್ತಿರೋದು. ವಚನ ಭ್ರಷ್ಟತೆಯ ಬಗ್ಗೆ ಹೈಕಮಾಂಡ್ ಅನ್ನು ಕೇಳಬೇಕು.ನಾನು ಹೈಕಮಾಂಡ್ ಭೇಟಿ ಮಾಡಿದ್ದು ರಾಜಕೀಯ ಕಾರಣಕ್ಕಲ್ಲ. ನ್ಯಾಯಾಲಯದ ಕೇಸ್ ಸಲುವಾಗಿ ನಾನು ದೆಹಲಿಗೆ ಹೋಗಿದ್ದು.ಸಿಎಂ ನಮಗೇನೂ ಹೊಸಬರಲ್ಲ, ಸಿಎಂ ಹಳಬರು. ನಮ್ಮ ಸಿಎಂ ಹತ್ರ ನಾನು ಮಾತಾಡುವುದಕ್ಕೆಆತಂಕ ಏನಿದೆ? ನಾನು ಬಿಜೆಪಿ ಸಿಎಂ ಹತ್ರ ಮಾತಾಡಿದ್ದೀನಾ. ನಮ್ಮ ಸಿಎಂ ಹತ್ರ ನಾನು ಮಾತಾಡಿದ್ದಕ್ಕೆ ಬೇಜಾರು ಯಾಕೆ ಮಾಡ್ಕೋತಿರಿ? ಎಂದು ಪ್ರಶ್ನಿಸಿದರು.
ಯಾರೇ ಅಧ್ಯಕ್ಷರಾಗಿ ಕೆಲಸ ಮಾಡಿದರೂ ಅವರಿಗೆ ಡಿಕೆಶಿವಕುಮಾರ್ ಸಹಕಾರ ಕೊಡ್ತಾರೆ. ರಿಸೈನ್ ಮಾಡಲ್ಲ ಕೆಪಿಸಿಸಿಗೆ ಅಂತ ಡಿಕೆಶಿ ನಿಮ್ಮ ಹತ್ತಿರ ಏನೂ ಹೇಳಿಲ್ವಲ್ಲ. ಪಕ್ಷದ ಕೆಲಸವನ್ನು ಡಿಕೆಶಿವಕುಮಾರ್ ಏನೆಲ್ಲ ಮಾಡಬೇಕೋ ಮಾಡಿದ್ದಾರೆ ಎಂದರು.
ಕೆಲವರು ಕಾರ್ಯಕರ್ತರ ಉತ್ಸಾಹ ಕುಗ್ಗಿಸುವ ಮಾತನಾಡುತ್ತಿರುತ್ತಾರೆ. ಕಾರ್ಯಕರ್ತರಿಗೆ ಆತ್ಮ ಸ್ಥೈರ್ಯ ತುಂಬುವುದು ಪಕ್ಷದ ಅಧ್ಯಕ್ಷರ ಜವಾಬ್ದಾರಿ. ಡಿಕೆ ಶಿವಕುಮಾರ್ ಗೆ ಏನೋ ದಾಖಲೆ ಅವಧಿ ಮಾಡಬೇಕು ಎಂಬುದಿಲ್ಲ. ಡಿಕೆಶಿ ಕನಸು ದಾಖಲೆ ಮಾಡಬೇಕು ಎಂಬುದೇನಿಲ್ಲ. ನಾವು ರಾಜಕಾರಣದಲ್ಲಿ ಶಾಶ್ವತವಾಗಿ ಇರಬೇಕು ಅಂತಂದ್ರೆ ಯಾರಿಗೇ ಆದ್ರೂ ನಾವು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಮಾರ್ಮಿಕವಾಗಿ ಹೇಳಿದರು.
Former MP DK Suresh made a striking remark on Thursday, stating that if his brother DK Shivakumar has the luck, he will certainly become the Chief Minister of Karnataka. Speaking to the media in Bengaluru, Suresh said that Chief Minister Siddaramaiah is known for keeping his word and that the Congress high command will respond at the right time regarding the leadership issue.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am