ಬ್ರೇಕಿಂಗ್ ನ್ಯೂಸ್
25-11-25 09:49 pm HK News Desk ಕರ್ನಾಟಕ
ಕಲಬುರಗಿ, ನ.26 : ಕರ್ನಾಟಕ ರಾಜ್ಯ ಖನಿಜ ನಿಗಮ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರೂ ಮೃತಪಟ್ಟಿದ್ದಾರೆ.
ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಡ್ಡ ಬಂದ ಬೈಕನ್ನು ತಪ್ಪಿಸಲು ಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಐಜಿಪಿ ಶಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ದೌಡಾಯಿಸಿದ್ದಾರೆ.
1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ರಾಜ್ಯ ಖನಿಜ ನಿಗಮ ಮತ್ತು ಬೆಸ್ಕಾಂ ಎಂಡಿ ಸಹ ಆಗಿದ್ದರು. ಅಲ್ಲದೇ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯ ನಿರ್ವಹಿಸಿದ್ದ ಅನುಭವ ಹೊಂದಿದ್ದರು.
Senior IAS officer and BESCOM MD Mahantesh Bilagi died in a horrific car accident near Jewargi in Kalaburagi district. His brothers Shankar Bilagi and Eranna Shirasangi also lost their lives when their vehicle overturned while trying to avoid a bike.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm