ಬ್ರೇಕಿಂಗ್ ನ್ಯೂಸ್
27-11-25 04:27 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : 140 ಶಾಸಕರನ್ನು ಹೊಂದಿದ್ದರೂ ಕಾಂಗ್ರೆಸಿಗೆ ಸುಗಮ ಆಡಳಿತ ನಡೆಸಲು ಸಾಧ್ಯವಿಲ್ಲ ಎಂದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲೆಸೆದಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರು ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಕಾತರದಿಂದ ಕಾಯುತ್ತಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆ ಜೋಳ, ಭತ್ತ ಬೆಳೆಯುವ ರೈತರಿಗೆ ಸರಕಾರವು ಪರಿಹಾರ ಕೊಡುವುದಾಗಿ ರೈತರು ಕಾಯುತ್ತಿದ್ದಾರೆ. ಅಡಿಕೆ ಬೆಳೆಗಾರರೂ ಸಂಕಷ್ಟದಲ್ಲಿದ್ದು, ಈ ಸರ್ಕಾರವು ಇದ್ಯಾವುದಕ್ಕೂ ಪರಿಹಾರ ನೀಡುವ ಲಕ್ಷಣ ಕಾಣುತ್ತಿಲ್ಲ ಎಂದು ಎಂದರು.
ಆಡಳಿತ ನಡೆಸಲು ಸಾಧ್ಯವಿದ್ದರೆ ನಡೆಸಿ, ಇದೇ ರೀತಿ ಕಿತ್ತಾಟ ಮಾಡಿಕೊಂಡು ದೆಹಲಿಯಲ್ಲಿ ನಾಲ್ಕು ದಿನ, ಬೆಂಗಳೂರಿನಲ್ಲಿ 3 ದಿನ ಇರುವುದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ಆಗ್ರಹಿಸಿದರು.
ಇವರು ಬೀದಿಗಿಳಿದು ಬಡಿಗೆ ತೆಗೆದುಕೊಂಡು ಹೊಡೆದಾಡುವ ಸನ್ನಿವೇಶ ಸೃಷ್ಟಿಯಾಗಿದೆ. ಅವರು ಹೊಡೆದಾಡಿಕೊಂಡರೆ ನಾವೇನು ಮಾಡಬೇಕೆಂದು ಯೋಚಿಸುತ್ತೇವೆ ಎಂದು ತಿಳಿಸಿದರು. ಕಾಂಗ್ರೆಸ್ ಒಳಗಿನ ಬಡಿದಾಟದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಇದರ ನಡುವೆ ಕಬ್ಬು ಬೆಳೆಗಾರರು, ತೊಗರಿ, ಹುರುಳಿ ಬೆಳೆಗಾರರು ಸೇರಿ ರೈತರು ಸಂಕಷ್ಟದಲ್ಲಿದ್ದಾರೆ. ಮೆಕ್ಕೆಜೋಳ, ಭತ್ತ ಬೆಳೆಯುವ ರೈತರು ಖರೀದಿ ಕೇಂದ್ರ ಪ್ರಾರಂಭಿಸಲು ಬೊಬ್ಬೆ ಹೊಡೆಯುತ್ತಿದ್ದಾರೆ. ಪಾಪ, ಮುಖ್ಯಮಂತ್ರಿಗಳಿಗೆ ಸಮಸ್ಯೆಗಳನ್ನು ಪರಿಹರಿಸಲು ಸಮಯ ಸಿಗುತ್ತಿಲ್ಲ.
ನಮ್ಮ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟದಲ್ಲಿ ನಮಗೆ ಆಸಕ್ತಿ ಇಲ್ಲ, ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಆಗಲೀ, ಮತ್ಯಾರಾದರೂ ಹೊರಗೆ ಬಂದರೆ ಅವರಿಗೆ ಬಾಹ್ಯ ಬೆಂಬಲ ಕೊಡುವುದಾಗಲೀ ಅಥವಾ ಬೆಂಬಲ ಪಡೆಯುವುದಾಗಲೀ ಪ್ರಶ್ನೆ ಉದ್ಭವವಾಗುವುದಿಲ್ಲ. ಮತದಾರರು ನಮ್ಮನ್ನು ವಿಪಕ್ಷವಾಗಿ ಕೂರಿಸಿದ್ದಾರೆ. ವಿಪಕ್ಷವಾಗಿ ಜವಾಬ್ದಾರಿಯುತ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅದರ ಬಗ್ಗೆ ಚರ್ಚೆ ಮಾಡುವ ಪ್ರಶ್ನೆ ಇಲ್ಲ ಎಂದರು.
BJP state president B.Y. Vijayendra has issued a sharp challenge to the ruling Congress, stating that despite having 140 MLAs, the party is failing to run the government smoothly. He urged the Congress to dissolve the Karnataka Legislative Assembly and face fresh elections if internal conflicts continue to paralyze administration.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 05:28 pm
HK News Desk
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm