ಬ್ರೇಕಿಂಗ್ ನ್ಯೂಸ್
05-12-25 11:20 pm HK News Desk ಕರ್ನಾಟಕ
ಧಾರವಾಡ, ಡಿ 05 : ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ತಮ್ಮ ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡ್ರ್ ಗೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ.
ಕಾರು ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್ಪೆಕ್ಟರ್ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್ಪೆಕ್ಟರ್ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.
ಇನ್ಸ್ಪೆಕ್ಟರ್ ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಆದ್ರೆ, ವಿಧಿ ಅವರನ್ನು ಅರ್ಧ ಹಾದಿಯಲ್ಲೇ ಈ ರೀತಿ ಬಲಿಪಡೆದುಕೊಂಡಿದೆ. ಮೊನ್ನೆ ಅಷ್ಟೇ ಕರ್ನಾಟಕ ಹಿರಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕಣ ಮಾಸುವ ಮುನ್ನೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಬಲಿಯಾಗಿದ್ದಾರೆ.
A horrific accident occurred on the outskirts of Annigeri town in Dharwad district, where a car burst into flames after hitting a road divider, killing a Lokayukta Inspector who was trapped inside.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm