ಬ್ರೇಕಿಂಗ್ ನ್ಯೂಸ್
08-12-25 11:26 am Bangalore Correspondent ಕರ್ನಾಟಕ
ಬೆಂಗಳೂರು, ಡಿ.8 : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಚುನಾವಣೆಯಲ್ಲಿ ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ 191 ಮತಗಳ ಅಂತರದಿಂದ ಗೆದ್ದು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತೀವ್ರ ಜಿದ್ದಾಜಿದ್ದಿನಿಂದ ದೇಶದ ಗಮನ ಸೆಳೆದಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣೆ ಭಾನುವಾರ ನಡೆದಿದ್ದು ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಪ್ರಮುಖರು ಮತದಾನ ಮಾಡಿದರು.
ಸಂಜೆ ನಡೆದ 20 ಸುತ್ತುಗಳ ಮತದಾನ ಎಣಿಕೆ ಪ್ರಕ್ರಿಯೆಯಲ್ಲಿ ಮಾಜಿ ಕ್ರಿಕೆಟಿಗರಾದ ಜಾವಗಲ್ ಶ್ರೀನಾಥ್ ಹಾಗೂ ಅನಿಲ್ ಕುಂಬ್ಳೆ ಬೆಂಬಲಿತ ಅಭ್ಯರ್ಥಿಯಾಗಿದ್ದ ವೆಂಕಟೇಶ್ ಪ್ರಸಾದ್ಗೆ ಒಟ್ಟು 749 ಮತಗಳು ದೊರೆತರೆ, ಬ್ರಿಜೇಶ್ ಪಟೇಲ್ ಬಣದ ಶಾಂತಕುಮಾರ್ಗೆ 558 ಮತಗಳು ಲಭಿಸಿವೆ. ಇದರೊಂದಿಗೆ ವೆಂಕಟೇಶ್ ಪ್ರಸಾದ್ 191 ಮತಗಳ ಅಂತರದಿಂದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವೆಂಕಟೇಶ್ ಪ್ರಸಾದ್ ಬಣದಿಂದ ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ, ಮಧುಕರ್ ಖಜಾಂಚಿಯಾಗಿ, ಸಂತೋಷ್ ಮೆನನ್ ಪ್ರಧಾನ ಕಾರ್ಯದರ್ಶಿಯಾಗಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಒಟ್ಟು 1315 ಮತಗಳ ಚಲಾವಣೆಯಾಗಿವೆ. 2013 ರಲ್ಲಿ 1351 ಮತಗಳು ಚಲಾವಣೆಯಾಗಿದ್ದವು.
ನವೆಂಬರ್ 24 ರಂದು ನಾಮಪತ್ರಗಳ ಪರಿಶೀಲನೆ ವೇಳೆ ಶಾಂತ ಕುಮಾರ್ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ವೆಂಕಟೇಶ್ ಪ್ರಸಾದ್ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಶಾಂತಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದು, ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿ ಚುನಾವಣೆ ನಡೆಸುವಂತೆ ಆದೇಶ ನೀಡಿತ್ತು. ಅದರಂತೆ ಚುನಾವಣೆ ನಡೆದಿದ್ದು ವೆಂಕಟೇಶ್ ಪ್ರಸಾದ್ ಗೆದ್ದಿದ್ದಾರೆ.
ಹಿಂದೆ 2010ರಿಂದ 2013ರ ವರೆಗೆ ಕೆಎಸ್ಸಿಎ ಉಪಾಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಸೇವೆ ಸಲ್ಲಿಸಿದ್ದರು. ಆಗ ಅನಿಲ್ ಕುಂಬ್ಳೆ ಅಧ್ಯಕ್ಷರಾಗಿದ್ದರು. ಜಾವಗಲ್ ಶ್ರೀನಾಥ್ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ 12 ವರ್ಷಗಳ ಬಳಿಕ ಮತ್ತೆ ಕೆಎಸ್ಸಿಎಗೆ ವಾಪಸ್ಸಾಗಿದ್ದಾರೆ. 1994ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ವೆಂಕಟೇಶ್ ಪ್ರಸಾದ್, ಟೀಂ ಇಂಡಿಯಾದ ಯಶಸ್ವಿ ಬೌಲರ್, ಕನ್ನಡ ಕಾಮೆಂಟರ್, ಕೋಚ್ ಆಗಿ ಗುರುತಿಸಿಕೊಂಡಿದ್ದಾರೆ.
Former Indian cricketer Venkatesh Prasad has been elected the new President of the Karnataka State Cricket Association (KSCA), defeating Shanthakumar by a margin of 191 votes. Supported by Anil Kumble and Javagal Srinath, Prasad's panel swept key positions, marking the faction’s second major victory. A total of 1,315 votes were polled in this high-profile election.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm