ಬ್ರೇಕಿಂಗ್ ನ್ಯೂಸ್
08-12-25 06:58 pm HK News Desk ಕರ್ನಾಟಕ
ಬೆಳಗಾವಿ, ಡಿ.8 : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಕುರ್ಚಿ ಕದನ ಜೋರಾಗಿರುವಾಗಲೇ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ ಎಂದು ಸಿಎಂ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಲಾಪಕ್ಕೂ ಮುನ್ನ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಅವರು ಮಾಧ್ಯಮಕ್ಕೆ ಮಾತನಾಡಿದರು. ಡಿಸಿಎಂ ಡಿ.ಕೆ ಶಿವಕುಮಾರ್ ತಮಗೊಂದು ಅವಕಾಶ ಕೊಡಿ ಎಂದು ದೆಹಲಿ ನಾಯಕರಲ್ಲಿ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಮಾಡುವಂತಹ ಪರಿಸ್ಥಿತಿ ಈಗ ಇಲ್ಲ ಎಂದು ಪಕ್ಷದ ಹೈಕಮಾಂಡ್ ಹೇಳಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ನನಲ್ಲಿ ಅಧಿಕಾರಕ್ಕಾಗಿ ಯಾವುದೇ ಕಿತ್ತಾಟ ನಡೆದಿಲ್ಲ. ಇದೆಲ್ಲ ಪ್ರತಿಪಕ್ಷದವರ ಸೃಷ್ಟಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಬದಲಾಗುತ್ತಾರೆಂದು ಹೇಳುತ್ತಿದ್ದಾರೆ. ಆದರೆ, ಸಿಎಂ ಬದಲಾಗುತ್ತಾರೆ ಎಂಬ ಕನಸು ಕಾಣಬೇಕಷ್ಟೇ ಎಂದು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ 5 ವರ್ಷ ಪೂರೈಸುತ್ತಾರೆ ಎಂಬ ನಂಬಿಕೆ ನನಗಿದೆ. ದೆಹಲಿಯಲ್ಲಿ ನಡೆದ ಸಭೆಯಲ್ಲು ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ನಾಯಕರು ಸಭೆಗೆ ಕರೆದಿಲ್ಲ ಎಂದೂ ಯತೀಂದ್ರ ಸ್ಪಷ್ಟಪಡಿಸಿದ್ದಾರೆ.
ಅವಿಶ್ವಾಸ ಮಂಡಿಸುವ ಸಾಮರ್ಥ್ಯ ಬಿಜೆಪಿಗಿಲ್ಲ
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸುವ ಕೆಲ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಆ ಪ್ರಯತ್ನಕ್ಕೆ ಕೈಹಾಕಿದರೆ ಮುಖಭಂಗ ಎದುರಿಸುತ್ತಾರೆ. ಆ ಸಾಮರ್ಥ್ಯ ಅವರಿಗೆಲ್ಲಿದೆ. ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ. ಅವರಿಗೆ ಇದು ಗೊತ್ತು. ಅನಗತ್ಯ ರಾಜಕೀಯ ಮಾಡುವ ಬದಲು ಜನರ ವಿಷಯಗಳ ಬಗ್ಗೆ ಚರ್ಚೆ ಮಾಡಲಿ. ಪ್ರತಿಪಕ್ಷವಾಗಿ ಸಮಯವನ್ನು ಸುದುಪಯೋಗ ಮಾಡಿಕೊಳ್ಳುತ್ತಾರೋ ಅಥವಾ ವ್ಯರ್ಥ ಮಾಡುತ್ತಾರೋ ಅವರೇ ನಿರ್ಧರಿಸಲಿ ಎಂದರು.
Amid growing speculation about a power tussle between Karnataka Chief Minister Siddaramaiah and Deputy Chief Minister DK Shivakumar, MLC Yathindra Siddaramaiah, son of the CM, made a startling statement saying the Congress high command has not approved any leadership change in the state.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm