ಬ್ರೇಕಿಂಗ್ ನ್ಯೂಸ್
09-12-25 08:56 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : 18ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ಹೆಚ್ಚುವರಿ ರಜೆ ನೀಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಬೆಂಗಳೂರು ಹೋಟೆಲ್ಗಳ ಸಂಘ ಮತ್ತು ಬೆಂಗಳೂರಿನ ಅವಿರತ ಎಎಫ್ಎಲ್ ಕನೆಕ್ಟಿವಿಟಿ ಸಿಸ್ಟಮ್ಸ್ ಲಿಮಿಟೆಡ್ ಸಲ್ಲಿಸಿದ ಎರಡು ಪ್ರತ್ಯೇಕ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಎಂ. ಅವರು ಮಧ್ಯಂತರ ಆದೇಶವನ್ನು ಹೊರಡಿಸಿದರು.
ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಉಚ್ಚ ನ್ಯಾಯಾಲಯದ ಮುಂದೆ ಇಂದು ಅರ್ಜಿ ವಿಚಾರಣೆಗೆ ಬಂದಿದ್ದು, ಹೋಟೆಲ್ ಮಾಲೀಕರ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದರು.
ಋತುಚಕ್ರ ಸಮಯದಲ್ಲಿ ರಜೆ ನೀಡಲು ಸಂಬಂಧಿತ ಕಾನೂನುಗಳಲ್ಲಿ ಯಾವುದೇ ನಿಬಂಧನೆ ಇಲ್ಲ. ಸರ್ಕಾರವು ವಿವಿಧ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ನೋಂದಾಯಿಸಲಾದ ವಿವಿಧ ಸಂಸ್ಥೆಗಳಿಗೆ ಅಧಿಸೂಚನೆಯ ಮೂಲಕ ಹೆಚ್ಚುವರಿ ರಜೆಯನ್ನು ಪರಿಚಯಿಸುವ ಅಧಿಕಾರವನ್ನು ಹೊಂದಿಲ್ಲ. ಋತುಚಕ್ರ ರಜೆ ನೀತಿ 2025 ಮೂಲಕ ಹೆಚ್ಚುವರಿ ರಜೆಯನ್ನು ಪರಿಚಯಿಸುವ ಮೊದಲು ಸರ್ಕಾರವು ಅರ್ಜಿದಾರರೊಂದಿಗೆ ಅಥವಾ ಇತರ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ.
1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಮಳಿಗೆ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1951ರ ತೋಟಗಾರಿಕಾ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಪರಿಸ್ಥಿತಿಗಳು) ಕಾಯ್ದೆ ಮತ್ತು 1961 ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿ ನೋಂದಾಯಿಸಲಾದ ಸಂಸ್ಥೆಗಳಿಗೆ ಋತುಚಕ್ರದ ರಜೆ ಕಡ್ಡಾಯ ನೀತಿ ತೊಂದರೆಗೀಡು ಮಾಡಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.
ಮಹಿಳಾ ಉದ್ಯೋಗಿಗಳು ಆಯಾ ತಿಂಗಳಲ್ಲಿ ಒಂದು ದಿನ ಋತುಚಕ್ರದ ರಜೆಯನ್ನು ಬಳಸಿಕೊಳ್ಳಬೇಕು, ಹಿಂದಿನ ತಿಂಗಳ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಸಾಧ್ಯವಿಲ್ಲ. ಅಲ್ಲದೆ, ಈ ರಜೆಯನ್ನು ಪಡೆಯಲು ಮಹಿಳಾ ಉದ್ಯೋಗಿಗಳು ಪ್ರತಿ ತಿಂಗಳು ಯಾವುದೇ ವೈದ್ಯಕೀಯ ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ ಎಂದು ಸರ್ಕಾರದ ಅಧಿಸೂಚನೆಯಲ್ಲಿ ಹೇಳಲಾಗಿದೆ. ಡಿ.2ರಂದು ರಾಜ್ಯದ ಮಹಿಳಾ ಸರ್ಕಾರಿ ಉದ್ಯೋಗಿಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದ ಮುಟ್ಟಿನ ರಜೆ ಮಂಜೂರು ಮಾಡುವಂತೆ ಸರ್ಕಾರ ಆದೇಶಿಸಿತ್ತು.
The Karnataka High Court has issued an interim stay on the state government’s notification mandating one day of menstrual leave per month for women employees aged 18 to 52. The order was challenged by the Bengaluru Hotels Association and AFL Connectivity Systems Ltd., after which Justice Jyoti M. issued notices to the state government.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm