ಬ್ರೇಕಿಂಗ್ ನ್ಯೂಸ್
18-12-25 02:26 pm HK News Desk ಕರ್ನಾಟಕ
Photo credits : TV9 Kannada
ಶಿವಮೊಗ್ಗ, ಡಿ.18 : ಕಾಂಗ್ರೆಸ್ ಪಕ್ಷದ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧ ಬಿಜೆಪಿ ನಾಯಕರು ಪಿತೂರಿ ಮಾಡಿದ್ದಾರೆಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದರು. ಈ ವೇಳೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿತ್ತು. ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರನ್ನು ಕೊನೆಗೆ ಪೊಲೀಸರು ಬಂಧಿಸಲು ಮುಂದಾಗಿದ್ದರು. ಇದೇ ವೇಳೆ, ತಳ್ಳಾಟ- ಜಟಾಪಟಿ ನಡೆದಿದ್ದು ಎಎಸ್‌ಐ ಅಮೃತಾ ಅವರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಾಗ ಚಿನ್ನದ ಕರಿಮಣಿ ನಾಪತ್ತೆಯಾಗಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯ ಎಎಸ್ಐ ಅಮೃತಾ ಸೇರಿ ಮಹಿಳಾ ಸಿಬಂದಿಯೂ ಕರ್ತವ್ಯದಲ್ಲಿದ್ದರು. ಚಿನ್ನದ ಮಾಂಗಲ್ಯ ಸರ ಮಿಸ್ ಆಗಿರುವುದು ತಿಳಿಯುತ್ತಿದ್ದಂತೆ ಅಧಿಕಾರಿ ಸ್ಥಳದಲ್ಲೇ ಕಣ್ಣೀರು ಹಾಕಿದ ಘಟನೆ ನಡೆಯಿತು. ಪ್ರತಿಭಟನೆ ಕಾರ್ಯಕ್ರಮದಲ್ಲಿ ಕರ್ತವ್ಯ ನಿರತ ಅಧಿಕಾರಿಯ ಚಿನ್ನದ ಸರವೇ ಕಳವಾಗಿರುವುದು ಇಲಾಖೆಗೆ ಮತ್ತು ಸಹೋದ್ಯೋಗಿಗಳ ನಡುವೆ ಮುಜುಗರ ತಂದಿದೆ. ಸ್ಥಳದಲ್ಲಿದ್ದ ಇತರ ಪೊಲೀಸ್ ಅಧಿಕಾರಿಗಳು ಅಮೃತಾ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಪ್ರಯತ್ನ ಮಾಡಿದರು.
ಪೊಲೀಸರು ಕಳವು ಘಟನೆ ಬಗ್ಗೆ ತೀವ್ರ ತನಿಖೆ ಆರಂಭಿಸಿದ್ದಾರೆ. ಪ್ರತಿಭಟನೆಯ ವೇಳೆ ಸೆರೆಹಿಡಿಯಲಾದ ವಿಡಿಯೋ ತುಣುಕುಗಳು ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಜಾಲ ಬೀಸಲಾಗಿದೆ. ಕಾಂಗ್ರೆಸ್ ಪ್ರತಿಭಟನೆಯ ಗದ್ದಲದ ನಡುವೆ ಈ ದುಷ್ಕೃತ್ಯ ಎಸಗಿದವರು ಯಾರು ಎಂಬುದು ಪೊಲೀಸರ ತನಿಖೆಯಿಂದಲೇ ತಿಳಿಯಬೇಕಿದೆ.
An incident that has caused embarrassment within the police department occurred in Shivamogga on December 18, when unidentified miscreants allegedly stole a gold mangalsutra from a woman police officer who was on bandobast duty during a Congress party protest.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm