ಬ್ರೇಕಿಂಗ್ ನ್ಯೂಸ್
18-12-25 08:40 pm HK News Desk ಕರ್ನಾಟಕ
ಬೆಳಗಾವಿ, ಡಿ.18 : "ಕರಾವಳಿಗೆ ಬೆಂಕಿ ಹಾಕಿ ಇಲ್ಲಿ ಏಕೆ ಬೆಂಕಿ ಹಚ್ಚುತ್ತಿದ್ದಾರೆ" ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿಕೆ ಬೆಳಗಾವಿ ಅಧಿವೇಶನದಲ್ಲಿ ಗದ್ದಲಕ್ಕೆ ಕಾರಣವಾಯಿತಲ್ಲದೆ, ಸಚಿವರ ಹೇಳಿಕೆ ಖಂಡಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಕುರಿತು ಚರ್ಚೆಯ ಸಂದರ್ಭದಲ್ಲಿ ಕರಾವಳಿ ಭಾಗದ ಶಾಸಕರು ಬೆಂಕಿ ಹಚ್ಚೋರು ಎಂದು ಬಿಜೆಪಿ ಶಾಸಕರನ್ನು ಗುರಿಯಾಗಿಸಿ ಸಚಿವ ಬೈರತಿ ಸುರೇಶ್ ಹೇಳಿದ್ದು ಕಿಡಿ ಹಚ್ಚಿತು. ಕರಾವಳಿಗೆ ಬೆಂಕಿ ಹಚ್ಚಿದವರು ಅಂದರೆ ಏನು ಅರ್ಥ? ಎಂದು ಬಿಜೆಪಿ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಹರೀಶ್ ಪೂಂಜಾ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಚನ್ನಬಸಪ್ಪ ಎದ್ದು ನಿಂತು ಸಚಿವರ ಹೇಳಿಕೆಯನ್ನು ಖಂಡಿಸಿದರು.
ಇದೇ ವೇಳೆ ಬೈರತಿ ಸುರೇಶ್ ಹಾಗೂ ಕರಾವಳಿ ಭಾಗದ ಬಿಜೆಪಿ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಮಾತಿನ ಚಕಮಕಿ ನಡೆದಿದ್ದು ಸಚಿವ ಬೈರತಿ ಸುರೇಶ್ ಸಿಟ್ಟಾಗಿ "ನೀನು ಯಾರು ನನಗೆ ಹೇಳಲು? ಸಭಾಧ್ಯಕ್ಷರಿದ್ದಾರೆ. ನಿನಗೆ ಅಧಿಕಾರ ಇಲ್ಲ. ಕುಳಿತುಕೊಳ್ಳಿ ಅನ್ನೋಕೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಸುನಿಲ್ ಕುಮಾರ್ ಅವರು ಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನೇ ಪ್ರಶ್ನಿಸಿ, 'ನೀವೂ ಕರಾವಳಿಯವರಲ್ಲವೇ? ಸಚಿವರು ಇಡೀ ಕರಾವಳಿಗೆ ಬೆಂಕಿ ಹಚ್ಚುವವರು ಎಂದು ಹಣೆಪಟ್ಟಿ ಕಟ್ಟುತ್ತಿದ್ದರೂ ನೀವು ಸುಮ್ಮನೆ ಕುಳಿತಿದ್ದೀರಲ್ಲಾ? ಪೀಠದಿಂದ ಹೊರಗೆ ಬನ್ನಿ. ಇಲ್ಲಾಂದ್ರೆ ಅವರ ಮಾತನ್ನು ಖಂಡಿಸಿ ಎಂದು ಸವಾಲು ಹಾಕಿದರು. ಸ್ಪೀಕರ್ ಅವರು ವಿವಾದಾತ್ಮಕ ಮಾತನ್ನು ಕಡತದಿಂದ ತೆಗೆದು ಹಾಕುವುದಾಗಿ ಹೇಳಿದರೂ ಬಿಜೆಪಿ ಶಾಸಕರು ಸಮಾಧಾನಗೊಳ್ಳದೆ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಮತ್ತು ಗದ್ದಲದ ನಡುವೆಯೇ ಸಭಾಧ್ಯಕ್ಷರು 'ದ್ವೇಷ ಭಾಷಣ ತಡೆ ವಿಧೇಯಕ'ವನ್ನು ಧ್ವನಿ ಮತದಿಂದ ಅಂಗೀಕರಿಸಿದರು. ಇದರಿಂದ ತೀವ್ರ ಆಕ್ರೋಶಗೊಂಡ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸದನದಲ್ಲೇ ವಿಧೇಯಕದ ಪ್ರತಿಯನ್ನು ಹರಿದು ಹಾಕಿದರು. 'ಇದು ದ್ವೇಷ ಭಾಷಣ ವಿರೋಧಿ ಬಿಲ್ ಅಲ್ಲ, ಬದಲಿಗೆ ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಬಿಲ್' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು.
The Karnataka Assembly witnessed high drama on Wednesday after Urban Development Minister Byrathi Suresh’s remark referring to BJP legislators as those who “set fire to the coastal region” triggered a major uproar during the Belagavi winter session. BJP MLAs strongly objected to the statement, stormed the well of the House and staged a protest, accusing the minister of insulting the entire coastal belt.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm