ಬ್ರೇಕಿಂಗ್ ನ್ಯೂಸ್
19-12-25 10:03 pm HK News Desk ಕರ್ನಾಟಕ
ಕಾರವಾರ, ಡಿ.19 : ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದ್ದು ಅದರಂತೆ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ, ನಾನೆಂದೂ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಲ್ಲ ಎಂದು ಹೇಳಿಲ್ಲ ಎಂಬುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದು ಅಧಿಕಾರ ಹಸ್ತಾಂತರದ ಬಗ್ಗೆ ಹೊಸ ವಿಷಯ ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ನಮ್ಮ ಮಧ್ಯೆ ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ ಎಂಬ ಸಿಎಂ ಹೇಳಿಕೆ ಬಗ್ಗೆ ಕೇಳಿದಾಗ, "ಅವರು ಐದು ವರ್ಷ ಇರಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇಲ್ಲ ಎಂದೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇರುವುದಕ್ಕೆ ಅವರು ರಾಜ್ಯದ ಸಿಎಂ ಆಗಿದ್ದಾರೆ" ಎಂದರು.
ಸಿಎಂ ಬದಲಾವಣೆ ಆಗುವುದಿಲ್ಲವೇ ಎಂದು ಕೇಳಿದಾಗ, "ನೀವು ಆ ಬಗ್ಗೆ ಚರ್ಚೆ ಮಾಡುತ್ತಿದ್ದೀರಿ. ನಮ್ಮಲ್ಲಿ ಅದು ಇಲ್ಲ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ" ಎಂದರು. ಕಳೆದ ಬಾರಿ ಬಂದಾಗ ನಿಮ್ಮ ಇಷ್ಟಾರ್ಥ ಸಿದ್ಧಿಯಾಗಿತ್ತು ಎಂದು ಹೇಳಿದ್ದೀರಿ, ಈ ಬಾರಿಯೂ ಆಗುವುದೇ ಎಂದು ಕೇಳಿದಾಗ, "ಅದೆಲ್ಲವನ್ನು ನಾನು ಹೇಳುವುದಿಲ್ಲ. ಇದು ನನ್ನ ಹಾಗೂ ಆ ತಾಯಿ ಮಧ್ಯೆ ಇರುವ ವಿಚಾರ. ಭಕ್ತ ಹಾಗೂ ಭಗವಂತನ ನಡುವಿನ ವಿಚಾರ. ವಿಘ್ನ ನಿವಾರಕ ವಿಘ್ನೇಶ್ವರನ ದರ್ಶನ ಪಡೆದಿದ್ದೇನೆ. ಮಹಾಬಲೇಶ್ವರನಿಗೆ ಪೂಜೆ ಮಾಡಿದ್ದೇನೆ, ಗಂಗಾಧರೇಶ್ವರನಿಗೆ ಪ್ರಾರ್ಥನೆ ಮಾಡಿದ್ದೇನೆ" ಎಂದರು.
ಇಂದು ಗೋಕರ್ಣಕ್ಕೆ ಬಂದಿದ್ದು ದೇವರ ದರ್ಶನ ಭಾಗ್ಯ ನನಗೆ ಸಿಕ್ಕಿದೆ. ಐದು ವರ್ಷಗಳ ಹಿಂದೆ ಜಗದೀಶ್ವರಿ ತಾಯಿ ಬಳಿಗೆ ಬಂದು, ನಮ್ಮ ಕುಟುಂಬದ ವಿಚಾರವಾಗಿ ಪ್ರಾರ್ಥಿಸಿದ್ದೆ. ಮತ್ತೆ ಇಲ್ಲಿಗೆ ಬರುವುದಾಗಿ ಪ್ರಾರ್ಥಿಸಿದ್ದೆ. ಅದರಂತೆ ಬಂದು ಜಗದೀಶ್ವರಿಗೆ ಪೂಜೆ ಸಲ್ಲಿಸಿದ್ದೇನೆ. ನನಗೆ ಹಾಗೂ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದು ಹಸನ್ಮುಖಿಯಾಗಿ ಇಲ್ಲಿಂದ ತೆರಳುತ್ತಿದ್ದೇನೆ ಎಂದು ತಿಳಿಸಿದರು.
Deputy Chief Minister D.K. Shivakumar made a surprising political statement, revealing that there is an “agreement” between him and Chief Minister Siddaramaiah, and clarified that he has never said Siddaramaiah will not continue as Chief Minister for five years.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm