ಬ್ರೇಕಿಂಗ್ ನ್ಯೂಸ್
27-12-25 02:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.27 : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ನಲ್ಲಿ ಟ್ರಾಫಿಕ್ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ಬಗ್ಗೆ ತಪಾಸಣೆ ನಡೆಸುತ್ತಿದ್ದಾಗ ಸೀಬರ್ಡ್ ಬಸ್ ಚಾಲಕನೊಬ್ಬ ಸಿಕ್ಕಿಬಿದ್ದಿದ್ದಾನೆ. ಕುಡಿದ ಮತ್ತಿನಲ್ಲಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ಬಳಿ ಉಪ್ಪಾರಪೇಟೆ ಟ್ರಾಫಿಕ್ ಪೊಲೀಸರು ಸೀಬರ್ಡ್ ಬಸ್ ಅಡ್ಡ ಹಾಕಿದ್ದು ಡ್ರೈವರನ್ನು ತಪಾಸಣೆ ಮಾಡಿದಾಗ ಆತ ಕುಡಿದಿರುವುದು ಪತ್ತೆಯಾಗಿದೆ. ಹೊಸ ವರ್ಷದ ಪ್ರಯುಕ್ತ ಬೆಂಗಳೂರು ನಗರಾದ್ಯಂತ 140 ಚೆಕ್ ಪೋಸ್ಟ್ ಗಳನ್ನು ಅಳವಡಿಸಿದ್ದು, ಕಡ್ಡಾಯವಾಗಿ ಡ್ರಿಂಕ್ ಅಂಡ್ ಡ್ರೈವ್ ಟೆಸ್ಟ್ ಮಾಡಲು ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ ಹಲವಾರು ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಗೆ ಹೊರಡುವ ಸಾವಿರಾರು ಬಸ್ ಗಳ ಚಾಲಕರ ತಪಾಸಣೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಹಲವಾರು ಡ್ರೈವರ್ ಗಳು ಕುಡಿದ ಅಮಲಿನಲ್ಲಿ ಬಸ್ ಚಲಾಯಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದ್ದರಿಂದ ತಪಾಸಣೆ ನಡೆಸಲಾಗುತ್ತಿದೆ.




ಇದೇ ವೇಳೆ, ಸೀಬರ್ಡ್ ಬಸ್ ಚಾಲಕ ನಾನು ಕುಡಿದೇ ಇಲ್ಲ ಎಂದು ವಾದ ಮಾಡಿದ್ದಾನೆ. ಬಸ್ ವಶಪಡಿಸಿಕೊಂಡಿರುವ ಪೊಲೀಸರು ಪ್ರಯಾಣಿಕರನ್ನ ಬೇರೊಂದು ಬಸ್ಸಿಗೆ ಶಿಫ್ಟ್ ಮಾಡಿಸಿದ್ದಾರೆ. ಎರಡು ದಿನದ ಹಿಂದೆ ಚಿತ್ರದುರ್ಗದಲ್ಲಿ ನಡೆದ ಅಪಘಾತದಲ್ಲಿ ಏಳು ಮಂದಿ ಸಾವನಪ್ಪಿದ್ದರೂ ಸೀಬರ್ಡ್ ಸಂಸ್ಥೆ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ.
During a special New Year drink-and-drive inspection near Majestic, Bengaluru traffic police caught a Seabird bus driver allegedly operating the vehicle under the influence of alcohol. Despite recent deadly accidents, including the Chitradurga tragedy that claimed seven lives, bus staff continue to ignore safety norms. The bus was seized and passengers were shifted to another vehicle while the driver, who claimed he had not consumed alcohol, was taken into police custody.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm