ಬ್ರೇಕಿಂಗ್ ನ್ಯೂಸ್
29-12-25 07:24 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29 : ಮುಂಬೈ ಪೊಲೀಸರು ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಮಾಡಿದ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನ ಪೊಲೀಸ್ ಅಧಿಕಾರಿಗಳ ಜೊತೆಗೆ ಮೀಟಿಂಗ್ ನಡೆಸಿದ್ದು ಹಿರಿಯ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಪತ್ತೆಯಾಗಿರುವ ಡ್ರಗ್ಸ್ ಮೌಲ್ಯ 58 ಕೋಟಿ ಅಲ್ಲ. ಒಂದು ಕೆ.ಜಿ.ಗೆ 30 ಲಕ್ಷ ರೂ. ಬೆಲೆಯಂದ್ರೆ ಅಂದಾಜು 4 ಕೆ.ಜಿ.ಗೆ 1.20 ಕೋಟಿ ರೂ. ಆಗುತ್ತದೆ. ಡ್ರಗ್ಸ್ ದಂಧೆಯ ವಿರುದ್ದ ಅಕ್ಟೋಬರ್ನಿಂದ ಹೆಚ್ಚಿನ ರೀತಿಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಎರಡು ದಿನಗಳ ಹಿಂದಿನ ಘಟನೆ ಬಗ್ಗೆ ಸಮರ್ಥಿಸಿಕೊಳ್ಳಲು ಹೋಗುವುದಿಲ್ಲ. ಅನೇಕ ಸಂದರ್ಭಗಳಲ್ಲಿ ನಮ್ಮ ಪೊಲೀಸರು, ಇಲ್ಲಿ ಸಿಕ್ಕ ಆರೋಪಿಗಳು ನೀಡಿರುವ ಮಾಹಿತಿ ಆಧರಿಸಿ ಬೇರೆ ರಾಜ್ಯಗಳಲ್ಲಿ ಕಾರ್ಯಾಚರಣೆ ಕೈಗೊಂಡಿರುತ್ತಾರೆ.
ಈಗಾಗಲೇ ಬೇರೆ ಬೇರೆ ಪ್ರಕರಣಗಳಲ್ಲಿ ನಾಲ್ಕು ಪೊಲೀಸರ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಆಗ ಅಲ್ಲಿನ ಪೊಲೀಸರ ವೈಫಲ್ಯ ಎಂದು ಹೇಳಲಾಗುತ್ತದೆಯೇ? ಮೂರು ಕಡೆಗಳಲ್ಲಿ ಫ್ಯಾಕ್ಟರಿ ಇತ್ತು ಎಂಬುದು ಸುಳ್ಳು. ಕಾರ್ಯಾಚರಣೆ ವೇಳೆ ನಮ್ಮ ಡಿಸಿಪಿಯವರು ಮುಂಬೈ ಪೊಲೀಸರೊಂದಿಗೆ ಇದ್ದರು. ಡ್ರಗ್ಸ್ ದಂಧೆಯ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಸಂಘಟಿತ ರೂಪದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಶನಿವಾರ ಮಹಾರಾಷ್ಟ್ರ ಪೊಲೀಸರು ಮುಂಬೈನಲ್ಲಿ ಸಿಕ್ಕ ಆರೋಪಿಯ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿ ಆರೋಪಿಯೊಬ್ಬನನ್ನು ಹಿಡಿದಿದ್ದಾರೆ. ಮುಂಬೈ ಪೊಲೀಸರು ಮತ್ತು ಬೆಂಗಳೂರು ನಗರ ಪೊಲೀಸರು, ಎನ್ಸಿಬಿ, ಸೋಕೋ ತಂಡ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಡ್ರಗ್ಸ್ ತಯಾರಿಸಲು ಬೇಕಾದ ಮೆಫೆಡ್ರಿನ್ ಎಂಬ ಕೆಮಿಕಲ್ ಸಂಗ್ರಹಿಸಿಟ್ಟುಕೊಂಡಿದ್ದ. ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸರು ಏನು ಕ್ರಮ ಕೈಗೊಂಡಿಲ್ಲ ಎಂಬ ಮಾತುಗಳು ಸರಿಯಲ್ಲ ಎಂದರು.
ಮುಜಾಜಿಲ್ಲದೇ ಕ್ರಮದ ಎಚ್ಚರಿಕೆ
ನೂರಾರು ಕೋಟಿ ರೂ. ಮೌಲ್ಯದ ಡ್ರಗ್ಸ್ ಹಿಡಿದಿದ್ದೇವೆ ಎಂದು ನಿಮ್ಮ ಬೆನ್ನು ನೀವು ತಟ್ಟಿಕೊಂಡು ಹೋದರೆ ಮುಗಿಯುವುದಿಲ್ಲ. ಇನ್ನು ಮುಂದೆ ಪ್ರತಿಯೊಂದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ನಾನು ಸುಮ್ಮನಿರುವುದಿಲ್ಲ. ಯಾವುದೇ ಶಿಫಾರಸುಗಳು ನಡೆಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನನಗೆ ಯಾವ ಮುಲಾಜು ಇಲ್ಲ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಜಂಟಿ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ವಂಶಿಕೃಷ್ಣ, ಸಿಸಿಬಿ ಜಂಟಿ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಕಾರ್ತಿಕ್ ರೆಡ್ಡಿ ಹಾಗೂ ಎಲ್ಲ ವಿಭಾಗಗಳ ಡಿಸಿಪಿಗಳು ಇದ್ದರು.
Following the Mumbai Police’s discovery of a drug manufacturing unit in Bengaluru, Karnataka Home Minister Dr. G. Parameshwara held a high-level meeting with senior Bengaluru Police officials on December 29. He strongly reprimanded officers, warning that any negligence in handling drug-related cases would invite strict action without hesitation.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am