ಬ್ರೇಕಿಂಗ್ ನ್ಯೂಸ್
02-01-26 10:24 pm HK News Desk ಕರ್ನಾಟಕ
ಬಳ್ಳಾರಿ, ಜ.2 : ಬ್ಯಾನರ್ ಕಟ್ಟುವ ವಿಚಾರದಲ್ಲಿ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆಗೆ ಸಂಬಂಧಿಸಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ವಿಜಯನಗರ ಜಿಲ್ಲೆಯ ಲೋಕಾಯುಕ್ತ ವಿಭಾಗದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪವನ್ ನೆಜ್ಜೂರ್ ಅವರನ್ನು ಡಿಸೆಂಬರ್ 31 ರಂದು ಬಳ್ಳಾರಿ ಎಸ್ ಪಿಯಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು.
ಒಂದೂವರೆ ವರ್ಷದಿಂದ ಬಳ್ಳಾರಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಶೋಭಾರಾಣಿ ವಿ.ಜೆ. ಅವರನ್ನು ಮಂಡ್ಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಪವನ್ ನೆಜ್ಜೂರ್ ಅವರನ್ನು ವರ್ಗಾಯಿಸಲಾಗಿತ್ತು. ನಿನ್ನೆ ಸಂಜೆಯ ವೇಳೆಗೆ ಗಲಾಟೆ ನಡೆದು ಪೊಲೀಸರ ಸಮ್ಮುಖದಲ್ಲಿಯೇ ಎರಡು ತಂಡಗಳ ಮಧ್ಯೆ ಘರ್ಷಣೆ ನಡೆದಿತ್ತು. ಘಟನೆಗೆ ಪೊಲೀಸ್ ಅಧಿಕಾರಿಗಳ ಲೋಪವೇ ಕಾರಣವೆಂಬ ಆರೋಪ ಕೇಳಿಬಂದಿತ್ತು.
One day after assuming office, Ballari SP Pavan Nejjur was suspended by the Karnataka government following the violent banner dispute that escalated into a clash, resulting in the death of a Congress worker by gunfire. Authorities cited mishandling of the situation and failure to brief senior officials as reasons for his suspension. Nejjur, who was transferred from the Vijayapura Lokayukta wing on December 31, took charge just hours before the violence erupted, allegedly due to lapses in police oversight.
15-04-26 03:15 pm
HK News Staffer
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
15-04-26 05:29 pm
HK News Staffer
ಚಿಕ್ಕೋಡಿಯಲ್ಲಿ ಮಾನಗೇಡಿ ಹತ್ಯೆ; ಪತಿಯನ್ನು ಬಿಟ್ಟು...
15-04-26 05:03 pm
ಕೌಟುಂಬಿಕ ಕಲಹ ; 14 ವರ್ಷದ ಮಗಳನ್ನು ಉಸಿರುಗಟ್ಟಿಸಿ...
14-04-26 11:16 pm
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am