ಬ್ರೇಕಿಂಗ್ ನ್ಯೂಸ್
30-12-20 08:40 pm Mangaluru Correspondent ಕರ್ನಾಟಕ
ಬೆಂಗಳೂರು, ಡಿ.30: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟಣೆ ವಿಚಾರದಲ್ಲಿ ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತವಾಗಿರುತ್ತದೆ. ಆದರೆ, ಕೆಲವು ಟಿವಿ ವಾಹಿನಿಗಳು ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯ ರೀತಿ ಪ್ರಸಾರ ಮಾಡುತ್ತಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ.

ಅಲ್ಲದೆ, ಪಕ್ಷ ರಹಿತ ಚುನಾವಣೆ ಆಗಿರುವ ಸಂದರ್ಭದಲ್ಲಿ ಯಾವುದೇ ಆಧಾರ ಇಲ್ಲದೆ ರಾಜಕೀಯ ಪಕ್ಷಗಳ ಪರ ಫಲಿತಾಂಶ ಪ್ರಸಾರ ಮಾಡಬಾರದು. ಈ ಬಗ್ಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಸೂಚನೆ ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಿಗೆ ರಾಜ್ಯ ಚುನಾವಣಾ ಆಯೋಗದಿಂದ ಸುತ್ತೋಲೆ ಮೂಲಕ ನಿರ್ದೇಶನ ನೀಡಲಾಗಿದೆ.
ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಡಿ.31 ರ ವರೆಗೂ ನಡೆಯಲಿದೆ. ಈ ಮಧ್ಯೆ ಪ್ರಸಾರ ಮಾಧ್ಯಮಗಳು ನಿರ್ದಿಷ್ಟ ರಾಜಕೀಯ ಪಕ್ಷಗಳು ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾಗಿ ಪ್ರಕಟ ಮಾಡುವಂತಿಲ್ಲ ಎಂದಿದ್ದರೂ, ಪಕ್ಷಗಳ ಬೆಂಬಲಿತರು ಎನ್ನುವ ನೆಲೆಯಲ್ಲಿ ಪ್ರಸಾರ ಮಾಡುತ್ತಿವೆ. ಈ ವೇಳೆ, ಹೆಚ್ಚಿನ ಬಾರಿ ರಾಜಕೀಯ ಪಕ್ಷಗಳ ನಾಯಕರು ಕೂಡ ತಮ್ಮ ಪಕ್ಷಗಳಿಗೇ ಗೆಲುವು ಅನ್ನುವ ನೆಲೆಯಲ್ಲಿ ಹೇಳಿಕೆ ನೀಡುತ್ತಾರೆ. ಅಲ್ಲದೆ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತಾರೆ. ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ಬಾವುಟ ಹಿಡಿದು ವಿಜಯೋತ್ಸವ ಆಚರಣೆಯೂ ನಡೆಯುತ್ತದೆ. ಈ ವೇಳೆ, ಮಾಧ್ಯಮಗಳು ಕೂಡ ಅದನ್ನೇ ಪ್ರಸಾರ ಮಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಎಚ್ಚರಿಸಬೇಕಾದ ಮಾಧ್ಯಮಗಳು ಅದನ್ನೇ ಪ್ರಸಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ಪರೋಕ್ಷವಾಗಿ ಚಾಟಿ ಬೀಸಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm