ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಸಚಿವ ಎಚ್ಡಿಕೆ ಡಿಚ್ಚಿಗೆ ಬೆದರಿದ ಪರಮೇಶ್ವರ್, ಜೆಡಿಎಸ್- ಬಿಜೆಪಿ ವಿಲೀನ ಮಾಡ್ಲಿಬಿಡಿ ಎಂದ ಡಿಕೆಶಿ !

08-01-26 10:45 pm       HK News Desk   ಕರ್ನಾಟಕ

ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಮಾತಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಡಿಸಿಎಂ ಮಂಗಳವಾರ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅದಕ್ಕೆ ಗೃಹ ಸಚಿವರು ಇಲ್ಲವೇ? ರಾಜ್ಯದಲ್ಲಿರುವ ಗೃಹ ಸಚಿವರು ಹೆಬ್ಬೆಟ್ಟು ಸಚಿವರಾ? ಎಂದು ಪ್ರಶ್ನಿಸಿದರು.

ಬೆಂಗಳೂರು, ಜ.8 ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವುದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಯಾರು? ಅವರಿಗೆ ಆ ಅಧಿಕಾರ ಯಾರು ಕೊಟ್ಟರು? ರಾಜ್ಯದಲ್ಲಿ ಇರೋದು ರಬ್ಬರ್ ಸ್ಟ್ಯಾಂಪ್ ಗೃಹ ಸಚಿವರಾ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಹೇಳಿಕೆ ಡಿಕೆಶಿ ಮತ್ತು ಪರಮೇಶ್ವರ್ ಇಬ್ಬರನ್ನೂ ಒಟ್ಟಿಗೇ ಕಿವಿ ಹಿಂಡುವಂತೆ ಮಾಡಿದೆ. 

ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಮಾತಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಡಿಸಿಎಂ ಮಂಗಳವಾರ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಅದಕ್ಕೆ ಗೃಹ ಸಚಿವರು ಇಲ್ಲವೇ? ರಾಜ್ಯದಲ್ಲಿರುವ ಗೃಹ ಸಚಿವರು ಹೆಬ್ಬೆಟ್ಟು ಸಚಿವರಾ? ಎಂದು ಪ್ರಶ್ನಿಸಿದರು. ಡಿಸಿಎಂ ಆದವರು ಯಾವ ಅಧಿಕಾರದ ಮೇಲೆ ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ? ಗೃಹ ಇಲಾಖೆಯಲ್ಲಿ ಇವರ ಹಸ್ತಕ್ಷೇಪ ಯಾಕೆ? ಡಿಸಿಎಂ ಎಂದರೆ ಅವರು ಮಂತ್ರಿ ಅಷ್ಟೇ. ಕಾಂಗ್ರೆಸ್ ಸತ್ಯ ಶೋಧನಾ ಸಮಿತಿಗೆ ಅಧಿಕಾರಿಗಳು ಯಾವ ಮಾಹಿತಿ ಕೊಡುತ್ತಾರೆ? ಕಾರ್ಯಕರ್ತರು, ಕಾಂಗ್ರೆಸ್ ನಾಯಕರು ಘಟನೆಗೆ ಕಾರಣರಾದ ಶಾಸಕರ ವಿರುದ್ದವೇ ಸತ್ಯಶೋಧನೆ ಸಮಿತಿಯ ಮುಂದೆ ದೂರು ನೀಡಿದ್ದಾರೆ. ಹಾಗಾದರೆ ನಿಮ್ಮ ತನಿಖೆಯ ಹಣೆಬರಹ ಏನು ಎಂದು ಅವರು ತೀಕ್ಷ್ಣ ಪ್ರಶ್ನೆ ಹಾಕಿದ್ದಾರೆ. 

ಬಳ್ಳಾರಿ ನಗರದಲ್ಲಿ ನಡೆದ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ತರಾತುರಿಯಲ್ಲಿ ಕೆಲಸ ಮಾಡುತ್ತಿದೆ. ಕೇವಲ ಬ್ಯಾನರ್ ಕಟ್ಟುವ ವಿಚಾರಕ್ಕೆ ಬೀದಿಯಲ್ಲಿ ಗುಂಡು ಹಾರಿಸ್ತಾರಾ? ಮರಣೋತ್ತರ ಪರೀಕ್ಷೆ ನಡೆದ ನಂತರ ಕೊಲೆಯಾದ ಕಾರ್ಯಕರ್ತನ ಮೃತದೇಹವನ್ನು ತರಾತುರಿಯಲ್ಲಿ ಸುಟ್ಟು ಹಾಕಿದ್ದು ಯಾಕೆ? ಕುಟುಂಬದವರಿಗೆ ಅಂತಿಮ ವಿಧಿ ವಿಧಾನ ನಡೆಸುವುದಕ್ಕೆ ಅವಕಾಶವನ್ನೂ ನೀಡದೆ ಮೃತದೇಹವನ್ನು ತರಾತುರಿಯಲ್ಲಿ ಸುಟ್ಟಿದ್ದು ಯಾಕೆ? ಇದಕ್ಕೆಲ್ಲಾ ಸರ್ಕಾರ ಉತ್ತರ ಕೊಡಬೇಕಲ್ಲವೇ? ಇಂದು ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ. 

ಆಟಕ್ಕುಂಟು ಲೆಕ್ಕಕ್ಕಿಲ್ಲ ಅಂತ ಯಾಕೆ ? ವಿಲೀನ ಮಾಡ್ಲಿ

ಇದರ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಅವರ ಸಲಹೆಯನ್ನು ಸ್ವೀಕಾರ ಮಾಡುತ್ತೇವೆ ಎಂದಿದ್ದಾರೆ. ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿ, ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವ ಇದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದರು. ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ ಎರಡು ಪಕ್ಷ' ಎಂಬ ಗೊಂದಲ ಇರುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಕೌಂಟರ್ ಮಾಡಿದ್ದಾರೆ.

Union Minister H. D. Kumaraswamy on Wednesday strongly questioned the authority of Deputy Chief Minister D. K. Shivakumar for convening a meeting of police officers in Ballari, asking who had empowered him to do so and whether the state’s Home Minister had been reduced to a “rubber stamp