ಬ್ರೇಕಿಂಗ್ ನ್ಯೂಸ್
10-01-26 01:17 pm Bangalore Correspondent ಕರ್ನಾಟಕ
ಬೆಂಗಳೂರು, ಜ.10: ಗಡಿಭಾಗ ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಶಾಲೆಗಳಲ್ಲಿ ಮಲಯಾಳಂ ಮಾತೃಭಾಷೆ ಕಡ್ಡಾಯ ಮಾಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಕೇರಳ ಸರ್ಕಾರದ ನಡೆ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಮಲಯಾಳಂ ಮಾತೃಭಾಷೆ ಕಡ್ಡಾಯದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಪುರುಷೋತ್ತಮ್ ಬಿಳಿಮಲೆ, ಕೇರಳ ಸರ್ಕಾರದ ನಡೆ ವಿರುದ್ದ ನಾವು ಕಾನೂನು ಹೋರಾಟ ಮಾಡುತ್ತೇವೆ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತರುವ ಕೆಲಸ ಮಾಡುತ್ತೇವೆ, ಈ ಸಂಬಂಧ ಕಾನೂನು ಸಚಿವರ ಜೊತೆ ಚರ್ಚೆ ಮಾಡುತ್ತಿದ್ದೇವೆ, ಮಾತೃಭಾಷೆ ಕಲಿಕೆ ಪ್ರತಿಯೊಬ್ಬರ ಹಕ್ಕು, ಕೇರಳ ಸರ್ಕಾರ ಮಲಯಾಳಿ ಕಡ್ಡಾಯ ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರಿಗೆ ತೆರಳುತ್ತಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಕಾಸರಗೋಡು ಜಿಲ್ಲೆಯ ಮುಖಂಡರು ಭೇಟಿಯಾಗಲು ವ್ಯವಸ್ಥೆ ಮಾಡಿದ್ದೇವೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ರಾಷ್ಟ್ರಪತಿಗಳಿಗೆ ಪತ್ರ ಬರೆಯುತ್ತೇವೆ, ಮಸೂದೆಯನ್ನ ತಡೆಹಿಡಿಯುವಂತೆ ಮನವಿ ಮಾಡುತ್ತೇವೆ ಎಂದು ಪುರುಷೋತ್ತಮ್ ಬಿಳಿಮಲೆ ತಿಳಿಸಿದ್ದಾರೆ.
ಇದೇ ವಿಚಾರದಲ್ಲಿ ಕೇರಳ ಸರ್ಕಾರದ ವಿರುದ್ಧ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಹಾವೇರಿಯಲ್ಲಿ ಮಾತನಾಡಿದ ಅವರು, ಕೇರಳದ ವಿಧಾನಸಭೆಯಲ್ಲಿ 2017ರಲ್ಲೂ ಈ ಮಸೂದೆಯನ್ನ ತಂದಿದ್ದರು, ಆವಾಗಲೂ ಕೇರಳ ರಾಜ್ಯದವರಿಗೆ ಸಂಪೂರ್ಣವಾಗಿ ಜಯ ಸಿಗಲಿಲ್ಲ, ಮಲಯಾಳಂ ಕಡ್ಡಾಯಗೊಳಿಸುವ ವಿಚಾರ ಕನ್ನಡಿಗರಿಗೆ ತದ್ವಿರುದ್ಧವಾಗಿದೆ ಎಂದು ಕಿಡಿ ಕಾರಿದರು.
ಈ ಬಗ್ಗೆ ಕೇರಳ ರಾಜ್ಯಪಾಲರು ನಮ್ಮ ಜೊತೆ ಸೌಜನ್ಯಯುತವಾಗಿ ಮಾತನಾಡಿದ್ದಾರೆ. ಅಲ್ಲಿನ ಕನ್ನಡಿಗರು ಸಂಪೂರ್ಣವಾಗಿ ವಿರೋಧ ಮಾಡಿದ್ದಾರೆ. ಈ ಹಿಂದೆ ಇಂತಹ ಘಟನೆ ನಡೆದಾಗ ಅಲ್ಲಿನ ಜನರು ಕೋರ್ಟ್ ಮೊರೆ ಹೋಗಿದ್ದರು. ಆಗಲೂ ನ್ಯಾಯಾಲಯದಲ್ಲಿ ನಮಗೆ ಜಯವಾಗಿದೆ, ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡುತ್ತೇವೆ, ರಾಜ್ಯಪಾಲರು ಮಸೂದೆ ಮಂಜೂರು ಮಾಡಲ್ಲ ಅನ್ನೋ ವಿಶ್ವಾಸವಿದೆ ಎಂದರು.
Amid growing opposition to Kerala’s move to make Malayalam compulsory in Kannada-medium schools in Kasaragod district, Kannada Development Authority Chairman Purushottam Bilimale has announced a legal battle against the state government’s decision. Speaking to the media, Bilimale said the move violates the fundamental right to learn in one’s mother tongue and is unacceptable. He stated that discussions are underway with the Law Minister to approach the Supreme Court and seek a stay on the implementation of the bill.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm