ಬ್ರೇಕಿಂಗ್ ನ್ಯೂಸ್
10-01-26 03:00 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 10 : ಇತ್ತೀಚಿಗೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಹಾಗೂ ಚಾರ್ಮಾಡಿ ಘಾಟ್ನ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಸಂಜೆ ವೇಳೆ ಹಾಗೂ ರಾತ್ರಿ ವೇಳೆ ಕಾಡಾನೆಯೊಂದು ಕಾಣಿಸಿಕೊಂಡು ಜನರಲ್ಲಿ ಹಾಗೂ ವಾಹನ ಸವಾರರಲ್ಲಿ ಭಯ ಹಾಗೂ ಭೀತಿಯನ್ನು ಉಂಟು ಮಾಡಿತ್ತು. ಇದೀಗ ಮತ್ತೆ ಅದೇ ರಸ್ತೆಯಲ್ಲಿ ಕಾಡಾನೆಯೊಂದು ರಸ್ತೆಗೆ ಅಡ್ಡವಾಗಿ ಬಂದು ನಿಂತಿದ್ದರಿಂದಿ ದಾರಿಹೋಕರು ಭಯಭೀತರಾಗಿದ್ದಾರೆ.
ಸುಮಾರು ಎರಡು ತಿಂಗಳ ನಂತರ ಈ ಕಾಡಾನೆ ಮತ್ತೆ ಈ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು, ರಾತ್ರಿ ವೇಳೆ ರಸ್ತೆ ಮಧ್ಯೆ ಬಂದು ನಿಲ್ಲುತ್ತಿದೆ. ಚಾರ್ಮಾಡಿ ಘಾಟಿಯ 2ನೇ ಹಾಗೂ 3ನೇ ತಿರುವಿನ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷವಾಗಿ ಭಾರಿ ಗಾತ್ರದ ಮರವೊಂದನ್ನು ಮುರಿದು ತನ್ನ ಖದರ್ ತೋರಿಸಿದೆ.


ಇದರಿಂದಾಗಿ ಸುಮಾರು ಒಂದು ತಾಸಿಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರಲ್ಲಿ ಕ್ಷಣ ಕಾಲ ಆತಂಕ ಮನೆ ಮಾಡಿತ್ತು. ಮೊಬೈಲ್ ನೆಟ್ವರ್ಕ್ ಇಲ್ಲದೆ ಮಾಹಿತಿ ನೀಡಲು ಸಾರ್ವಜನಿಕರು ಪರದಾಡಬೇಕಾಯಿತು.
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ನಲ್ಲಿ ಪದೇ ಪದೆ ಆನೆ ಕಾಣಿಸಿಕೊಳ್ಳುತ್ತಿದೆ. ಪ್ರತಿನಿತ್ಯ ಈ ರಸ್ತೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು, ಆಂಬುಲೆನ್ಸ್ಗಳು, ಸರ್ಕಾರಿ ಬಸ್ಗಳು ಸಂಚರಿಸುತ್ತವೆ. ಹೀಗೆ ಪ್ರಯಾಣಿಸುವಾಗ ಒಮ್ಮಿಂದೊಮ್ಮೆಲೆ ಕಾಡಾನೆ ರಸ್ತೆಯಲ್ಲಿ ನಿಂತಿದ್ದರೆ ಪ್ರಯಾಣಿಕರು ಭಯಭೀತರಾಗುತ್ತಾರೆ.
ಒಂದು ವೇಳೆ ಈ ಕಾಡಾನೆ ತಿರುಗಿ ಬಿದ್ದರೆ ಪ್ರಯಾಣಿಕರು ಪ್ರಾಣಾಪಾಯದಿಂದ ತಪ್ಪಿಸಿಕೊಳ್ಳುವುದೇ ದುಸ್ತರವಾಗಲಿದೆ. ಅರಣ್ಯ ಇಲಾಖೆ ಕೂಡಲೇ ಈ ಕುರಿತು ಗಂಭೀರವಾಗಿ ಯೋಚಿಸಿ ಈ ಆನೆಯನ್ನು ಬೇರೆ ಕಡೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.
ಇತ್ತೀಚಿಗೆ ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಹಿಂಡೊಂದು ಏಕಕಾಲಕ್ಕೆ ರಸ್ತೆ ದಾಟಿದ್ದವು. ಈ ಅಪರೂಪದ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು. ಸುಮಾರು 25ಕ್ಕೂ ಹೆಚ್ಚು ಕಾಡಾನೆಗಳು ಮುತ್ತೋಡಿ ರಸ್ತೆಯನ್ನು ದಾಟುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಗಜಪಡೆ ರಸ್ತೆ ದಾಟುತ್ತಿರುವುದನ್ನು ಕಂಡ ವಾಹನ ಸವಾರರು, ಅಪರೂಪದ ದೃಶ್ಯವನ್ನು ರೆಕಾರ್ಡ್ ಮಾಡಿದ್ದರು.
ಇತ್ತೀಚೆಗೆ ಅಭಯಾರಣ್ಯದಲ್ಲಿ ಆನೆಗಳ ಸಂಖ್ಯೆ ಹೆಚ್ಚಳವಾಗಿತ್ತು. ಹೀಗಾಗಿ, ಕಾಡಂಚಿನ ಗ್ರಾಮಗಳತ್ತ ಗಜಪಡೆ ದಾಂಗುಡಿ ಇಡುತ್ತಿವೆ. ಒಮ್ಮೆಲೇ ಇಷ್ಟೊಂದು ಆನೆಗಳನ್ನು ಕಂಡು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ನಿರ್ಮಾಣವಾಗಿತ್ತು. ತೋಟ, ಗದ್ದೆ ಹಾಗೂ ಮನೆಗಳ ಮೇಲೆ ಕಾಡಾನೆಗಳ ಹಿಂಡು ದಾಳಿ ಮಾಡುವ ಬಗ್ಗೆ ಜನರು ಭಯಭೀತರಾಗಿದ್ದರು. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ವಹಿಸಲಿ ಎಂದು ಆಗ್ರಹಿಸಿದ್ದರು.
Panic gripped commuters after a lone wild elephant stood blocking the main road in the Charmadi Ghat forest stretch of Chikkamagaluru district, causing a traffic jam stretching for kilometres. The elephant reportedly appeared near the second and third hairpin bends of the ghat road during night hours, even breaking a large tree and displaying aggressive behaviour.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm