ಬ್ರೇಕಿಂಗ್ ನ್ಯೂಸ್
12-01-26 08:20 pm Mangaluru ಕರ್ನಾಟಕ
ಗದಗ, ಜ.12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವ ಚಿನ್ನದ ನಿಧಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಆ ಜಾಗವೇ ತಮಗೆ ಬೇಡ, ಅದನ್ನು ದೇವಸ್ಥಾನಕ್ಕೆ ಇಟ್ಟುಕೊಳ್ಳಲಿ. ಸರ್ಕಾರ ತಮಗೆ ಬೇರೆ ಜಾಗ ಮಾಡಿಕೊಡಬೇಕು ಎಂದು ಅಲ್ಲಿನ ಕುಟುಂಬ ಹೊಸ ಬೇಡಿಕೆ ಇಟ್ಟಿದೆ. ಸ್ಥಳೀಯ ಲಕ್ಷ್ಮೀ ದೇವಾಲಯದ ಹಿಂಭಾಗದಲ್ಲಿ ಚಿನ್ನದ ನಿಧಿ ಪತ್ತೆಯಾಗಿರುವುದರಿಂದ ಈ ಪ್ರದೇಶವು ‘ಅಪಶಕುನ’ ಎಂದು ಪರಿಗಣಿಸಿ, ಅಲ್ಲಿಂದ ದೂರ ಹೋಗಲು ಕುಟುಂಬ ಮುಂದಾಗಿದೆ.
"ನಿಧಿ ಪತ್ತೆಯಾದ ಬಳಿಕ ಆ ಜಾಗದಲ್ಲಿ ಅನಾಹುತಗಳು ಸಂಭವಿಸುವ ಭಯ ಕಾಡುತ್ತಿದೆ. ಆ ಜಾಗದಿಂದ ದೊಡ್ಡ ಸರ್ಪ ಎದ್ದಿರಬಹುದು. ಒಂದಲ್ಲ ಒಂದು ದಿನ ಕಚ್ಚಬಹುದು ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ನಮಗೆ ಒಬ್ಬನೇ ಮಗ ಇದ್ದಾನೆ. ಅವನ ಭವಿಷ್ಯ ನಮಗೆ ಮುಖ್ಯ. ಹೀಗಾಗಿ ಆ ಜಾಗ ನಮಗೆ ಬೇಡ” ಎಂದು ಕುಟುಂಬಸ್ಥರು ಹೇಳಿದ್ದಾರೆ. ಇದೇ ವೇಳೆ, ಹಾವಿನ ಬೆಂಕಿ ದೇವರಿಗೆ ಇರಲಿ. ನಮಗೆ ಬೇರೆ ಕಡೆ ಜೀವನ ನಡೆಸಲು ದಾರಿ ಮಾಡಿಕೊಡಿ. ಬೆಂಕಿ ಕಟ್ಟಿಕೊಂಡು ಮುಂದೆ ಹೋದ್ರೆ ಚರ್ಮ ಸುಡುತ್ತೆ. ಹೀಗಾಗಿ ತಾಯಿ ಮತ್ತು ಮಗನಿಗೆ ಸುರಕ್ಷಿತ ಸ್ಥಳದಲ್ಲಿ ಮನೆ ಕಟ್ಟಿಸಿಕೊಡಬೇಕು” ಎಂದು ಅವರು ಮನವಿ ಮಾಡಿದ್ದಾರೆ.


ನಿಧಿ ಪತ್ತೆಯಾದ ಜಾಗವನ್ನು ಸರ್ಕಾರ ವಶಕ್ಕೆ ಪಡೆದು, ಅಲ್ಲಿ ದೇವಸ್ಥಾನ ನಿರ್ಮಿಸಿ ಅಥವಾ ಈಗಿರುವ ಲಕ್ಷ್ಮೀ ದೇವಾಲಯವನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ರಿತ್ತಿ ಕುಟುಂಬದ ಬೇಡಿಕೆಯಾಗಿದೆ. ಇದೇ ವೇಳೆ, ಆ ಜಾಗಕ್ಕೆ ಪ್ರಾಚ್ಯವಸ್ತು ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಮಾತನಾಡಿ, “ಲಕ್ಕುಂಡಿಯನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಪ್ರಸ್ತಾವನೆ ಸಲ್ಲಿಸುವ ಸಂದರ್ಭದಲ್ಲಿ ಈ ನಿಧಿ ಪತ್ತೆಯಾಗಿದೆ. ಕಲ್ಯಾಣ ಚಾಲುಕ್ಯರು ಹಾಗೂ ರಾಷ್ಟ್ರಕೂಟರ ಕಾಲದಲ್ಲಿ ಇಲ್ಲಿ ಟಂಕಸಾಲೆ (ಚಿನ್ನದ ನಾಣ್ಯ ತಯಾರಿಕಾ ಕೇಂದ್ರ) ಇದ್ದುದನ್ನು ಶಾಸನಗಳು ಸೂಚಿಸುತ್ತವೆ. ಪ್ರಾಚ್ಯವಸ್ತು ಇಲಾಖೆಗೆ ಸಂಬಂಧಿಸಿದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ನಿಧಿ ಸಿಕ್ಕ ಜಾಗದಲ್ಲಿ ಉತ್ಖನನ ನಡೆಸುವ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲಾಧಿಕಾರಿಗಳ ಜೊತೆಗೆ ಪರಿಹಾರದ ವಿಚಾರವನ್ನೂ ಚರ್ಚಿಸಿ, ಕಾನೂನು ಮತ್ತು ಮಾನವೀಯತೆ ಆಧಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಕ್ಕುಂಡಿ ಗ್ರಾಮವು 11 ಮತ್ತು 12ನೇ ಶತಮಾನದ ದೇವಸ್ಥಾನಗಳಿಗೆ ಹೆಸರುವಾಸಿಯಾಗಿದೆ. 101 ದೇವಸ್ಥಾನ ಹಾಗೂ 101 ಬಾವಿಗಳನ್ನು ಹೊಂದಿರುವ ಈ ಗ್ರಾಮವು 'ಶಿಲ್ಪಕಲೆಯ ತೊಟ್ಟಿಲು' ಎಂದೇ ಪ್ರಖ್ಯಾತಿ ಪಡೆದಿದೆ. ಕಲ್ಯಾಣ ಚಾಲುಕ್ಯರ ಕಾಲದ ವೈಭವಕ್ಕೆ ಈ ಗ್ರಾಮ ಸಾಕ್ಷಿಯಾಗಿದ್ದು, ಆಗಾಗ ಇಂತಹ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಈಗ ಪತ್ತೆಯಾದ ನಿಧಿ ಆ ಕಾಲದ ಆರ್ಥಿಕ ಸಮೃದ್ಧಿಯನ್ನು ನೆನಪಿಸುವಂತಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.
ನರಗುಂದ ಶಾಸಕ ಸಿ.ಸಿ. ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ರಿತ್ತಿ ಕುಟುಂಬವನ್ನು ಶಾಲು ಹೊದಿಸಿ ಗೌರವಿಸಿದರು. ಜಾಗದಲ್ಲಿ ಉತ್ಖನನ ನಡೆದರೆ, ಅವರಿಗೆ ಪ್ರತ್ಯೇಕ ಜಾಗದಲ್ಲಿ ಮನೆ ನಿರ್ಮಿಸಿಕೊಡಬೇಕು. ಸುಮಾರು ಅರ್ಧ ಕಿಲೋ ಬಂಗಾರ ಪತ್ತೆಯಾಗಿದೆ. ರಿತ್ತಿ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗಬೇಕು ಎಂದು ಅವರು ಅಭಿಪ್ರಾಯಪಟ್ಟರು.
The recent discovery of a buried gold treasure in Lakkundi village of Gadag district has taken a new turn, with the affected family expressing fear of bad omens and demanding that the land where the treasure was found be handed over to the government for religious use, while they are provided an alternative site for residence. The treasure was discovered behind the Lakshmi Temple in Lakkundi. Following the discovery, the Ritti family, which owns the land, stated that they no longer wish to live there, citing fear and superstition associated with the site. The family believes the place has become inauspicious and expressed concern over potential dangers.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm