ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ, ರೈತರ ಕಣ್ಣೀರು

13-01-26 10:13 pm       HK News Desk   ಕರ್ನಾಟಕ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಾರರು ಕಂಗಲಾಗಿದ್ದಾರೆ.

ಚಿಕ್ಕಮಗಳೂರು, ಜ 13 : ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಾರರು ಕಂಗಲಾಗಿದ್ದಾರೆ.

ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಚಿಕ್ಕಮಗಳೂರು ಕೆಲವು ಭಾಗದಲ್ಲಿ ಮಳೆಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ಗಾಳಿ ಬೀಸಿದ್ದು ವಿಪರೀತ ಚಳಿಯ ವಾತಾವರಣದಿಂದ ಇಲ್ಲಿನ ಜನರು ರೋಸಿ ಹೋಗಿದ್ದಾರೆ.

ವರ್ಷದ ಮೊದಲ ವರ್ಷಧಾರೆಗೆ ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಇದ್ದಕ್ಕಿಂದಂತೆ ಆರಂಭವಾದ ಧಾರಾಕಾರ ಮಳೆಯಿಂದ ಬಾರೀ ನಷ್ಟ ಉಂಟಾಗಿದೆ.

ಈಗಾಗಲೇ ಕಾಫಿ ಮತ್ತು ಅಡಿಕೆ ಕೊಯ್ದು ಆರಂಭವಾಗಿದ್ದು, ಮೋಡ ಕವಿದ ವಾತಾವರಣದಲ್ಲಿ ಅಡಿಕೆ ಮತ್ತು ಕಾಫಿ ಕಾಳು ಒಣಗಿಸುವುದು ದೊಡ್ಡ ಸವಾಲಾಗಿತ್ತು. ಅಕಾಲಿಕ ಮಳೆಯಿಂದ ಬೆಳೆಗಾರರು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಮಳೆಯಿಂದ ಭತ್ತದಕ್ಕೂ ಹಾನಿಯಾಗಿದೆ. ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳು ಮಳೆಗೆ ಗಿಡದಿಂದ ಉದುರುವ ಆತಂಕ ಎದುರಾಗಿದೆ. ಒಟ್ಟಾರೆಯಾಗಿ ವರ್ಷದ ಮೊದಲ ವರ್ಷಧಾರೆ ರೈತರು ಮತ್ತು ಬೆಳೆಗಾರರಲ್ಲಿ ಆತಂಕವನ್ನು ಮೂಡಿಸಿದೆ. ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ.

ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಮೂಡಿಗೆರೆ, ಬಾಳೆಹೊನ್ನೂರು ಹಾಗೂ ಚಿಕ್ಕಮಗಳೂರು ಸುತ್ತಮುತ್ತ ಒಂದು ಗಂಟೆಗಳ ಕಾಲ ಭಾರೀ ಗಾಳಿಯೊಂದಿಗೆ ಮಳೆಯಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೋಡ ಕವಿದ ವಾತಾವರಣದ ನಡುವೆ ಕಾಫಿ ಒಣಗಿಸುವುದೇ ದೊಡ್ಡ ಸವಾಲಾಗಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಈ ಧಾರಾಕಾರ ಮಳೆ ಅನ್ನದಾತರ ಆತಂಕವನ್ನು ಇಮ್ಮಡಿಗೊಳಿಸಿದೆ.

ಅಕಾಲಿಕ ಮಳೆಯ ಹೊಡೆತಕ್ಕೆ ಗಿಡದಲ್ಲೇ ಹಣ್ಣಾಗಿರುವ ಕಾಫಿ ನೆಲಕ್ಕುದುರುತ್ತಿದ್ದರೆ, ಮತ್ತೊಂದೆಡೆ ಕಟಾವಿಗೆ ಬಂದಿರುವ ಭತ್ತದ ಬೆಳೆ ಕೂಡ ನೆಲಕಚ್ಚುವ ಭೀತಿ ಎದುರಾಗಿದೆ.

Heavy unseasonal rainfall in the Malenadu region of Chikkamagaluru district has left coffee growers devastated. Areas including Kalasa, Kudremukh, Horanadu, Sringeri, Mudigere, Balehonnur and parts of Chikkamagaluru witnessed intense rainfall accompanied by strong winds for over an hour, disrupting normal life.