ಬ್ರೇಕಿಂಗ್ ನ್ಯೂಸ್
19-01-26 08:34 pm Bangalore Correspondent ಕರ್ನಾಟಕ
ಬೆಂಗಳೂರು, ಜ 18 : ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. "ಎಷ್ಟೇ ದೊಡ್ಡ ಅಧಿಕಾರಿಯಾದರೂ ಬಿಡುವುದಿಲ್ಲ. ತನಿಖೆ ಮಾಡಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆ " ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸಿಎಂ, "ನನಗೆ ಮುಂಜಾನೆ ಈ ವಿಚಾರ ಗೊತ್ತಾಗಿದೆ. ವಿಚಾರಣೆ ಮಾಡಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಮುಂದೆ ಯಾರೂ ದೊಡ್ಡವರಲ್ಲ. ಎಷ್ಟೇ ಎತ್ತರ ವ್ಯಕ್ತಿಯಾದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಕಡ್ಡಾಯವಾಗಿ ಕ್ರಮ ಕೈಗೊಳ್ಳುತ್ತೇವೆ " ಎಂದು ಸ್ಪಷ್ಟಪಡಿಸಿದರು.
ರಾಮಚಂದ್ರರಾವ್ ರಾಸಲೀಲೆ ಪ್ರಕರಣದ ಕುರಿತು ಬೆಳಗಾವಿಯ ನಂದಗಡದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕ್ರಿಯೆ ನೀಡಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಕಾನೂನು ರೀತಿ ಕ್ರಮ ಆಗಲಿ. ತಪ್ಪು ಮಾಡಿದ್ರೆ ಖಂಡಿತವಾಗಿ ಶಿಕ್ಷೆ ಕೊಡುತ್ತೇವೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ರೆ ಎಷ್ಟೇ ದೊಡ್ಡ ಅಧಿಕಾರಿ ಆದ್ರೂ ಕ್ರಮವಾಗುತ್ತೆ ಎಂದರು.
ವೈರಲ್ ಆಗಿರುವ ವಿಡಿಯೋಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆ ಸರಸವಾಡುವಾಗ ವಿಡಿಯೋ ಮಾಡಿಕೊಂಡಿದ್ದು, ಕ್ಯಾಮೆರಾ ಎದುರೇ ಬೆತ್ತಲಾಗಿ ವಿಕೃತಿ ಮೆರೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ
ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜೊತೆಗೂ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ 'ಕಾಮ'ಕಾಂಡದ ಸರಣಿ ವಿಡಿಯೋಗಳು ಈಗ ಹೊರಬರುತ್ತಿವೆ.
Karnataka Chief Minister Siddaramaiah has assured strict disciplinary action against IPS officer Ramachandra Rao over a controversial video allegedly showing him behaving indecently in his office. Speaking to the media in Belagavi, the CM said no one is above the law, regardless of rank, and a thorough inquiry will be conducted.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm